ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 07 : ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಾವಂತ ಒಕ್ಕಲಿಗ ಮತ್ತು ಕುಂಚಿಟಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಒಕ್ಕಲಿಗ ಅಥವಾ ಕುಂಚಿಟಿಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಸ್ವಯಂ ದೃಢಿಕೃತ ಅರ್ಜಿಯೊಂದಿಗೆ ಅಂಕಪಟ್ಟಿ, ಆಧಾರ್‍ಕಾರ್ಡ್, ಜಾತಿ ಪ್ರಮಾಣ ಪತ್ರ, ವರ್ಗಾವಣೆ ಪತ್ರ, ಇತ್ತೀಚಿನ ಎರಡು ಪಾಸ್‍ಪೋರ್ಟ್ ಅಳತೆಯ ಫೋಟೋದೊಂದಿಗೆ ಪೋಷಕರ ಹೆಸರು ಮತ್ತು ವಿಳಾಸ, ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಿ ದಿನಾಂಕ : 20-5-2026 ರ ಒಳಗಾಗಿ ಚಿತ್ರದುರ್ಗ ಜಿಲ್ಲಾ ಒಕ್ಕಲಿಗರ ಸಂಘ, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಎದುರು, ಬಿ.ಡಿ.ರಸ್ತೆ ಚಿತ್ರದುರ್ಗ-577501 ಈ ವಿಳಾಸಕ್ಕೆ ಖುದ್ದಾಗಿಯಾಗಲಿ ಅಥವಾ ಅಂಚೆ ಮೂಲಕವಾಗಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಎಸ್.ಈರಣ್ಣ, ಅಧ್ಯಕ್ಷ ಜಿ.ಪಿ.ಚೇತನ್, ಪ್ರಧಾನ ಕಾರ್ಯದರ್ಶಿ ಎಸ್.ಜಗನ್ನಾಥ್ ಇವರುಗಳು ತಿಳಿಸಿದ್ದಾರೆ. ನಿಗಧಿತ ಸಮಯದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಮೊ : 9448567131, 9141777779, 9448697045, 9980278204, 9448665133, 9916420698 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















