ಚಿತ್ರದುರ್ಗ. ಮೇ. 07: ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಇದೇ ಮೇ 22ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ಶಿಕ್ಷಕರ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಕಂಪ್ಯೂಟರ್ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು chitradurga.nic.in ನಲ್ಲಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವಾಗ ತಮ್ಮ ಆಧಾರ್ ಕಾರ್ಡ್ ಹಾಗೂ ಆನ್‍ಲೈನ್ ಅರ್ಜಿ ಸಲ್ಲಿಕೆಯ ಸ್ವೀಕೃತಿ ಪ್ರತಿಯನ್ನು ತರುವುದು ಕಡ್ಡಾಯವಾಗಿದೆ.
ನಿಗದಿತ ಸಮಯಕ್ಕೆ ಹಾಜರಾಗದ ಅಭ್ಯರ್ಥಿಗಳನ್ನು ಗೈರು ಹಾಜರಿ ಎಂದು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಯನ್ನು chitradurga.nic.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















