Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಸೋಲು : 15 ವರ್ಷಗಳ ನಂತರ ಕೂದಲು ಕತ್ತರಿಸಿಕೊಂಡ ಬಿಜೆಪಿ ಕಾರ್ಯಕರ್ತ!

---Advertisement---

ಸುದ್ದಿಒನ್,ಮೇ.08: 15 ವರ್ಷಗಳ ಕಾಲ ಕೂದಲು ಕತ್ತರಿಸದೇ ಇರುವುದು ಸಾಮಾನ್ಯ ವಿಷಯವಲ್ಲ. ಆದರೆ ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ವ್ಯಕ್ತಿಯೊಬ್ಬರು ರಾಜಕೀಯ ಕಾರಣಕ್ಕಾಗಿ ಇಂತಹದೊಂದು ಕಠಿಣ ಪ್ರತಿಜ್ಞೆ ಮಾಡಿ, ಈಗ ಅದನ್ನು ಪೂರೈಸಿದ್ದಾರೆ.

ಬಂಗಾಳದ ಬಾಮನ್ ಪಾರಾ ಗ್ರಾಮದ ನಿವಾಸಿ ಬನೇಶ್ವರ್ ಬರ್ಮನ್ ಅವರು ಕಳೆದ 15 ವರ್ಷಗಳ ನಂತರ ತಮ್ಮ ಕೂದಲನ್ನು ಕತ್ತರಿಸಿಕೊಂಡಿದ್ದಾರೆ. 2011 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (TMC) ಅಧಿಕಾರಕ್ಕೆ ಬಂದಾಗ, ಅವರು ಒಂದು ಪ್ರತಿಜ್ಞೆ ಮಾಡಿದ್ದರು: ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೆ ನಾನು ಕೂದಲು ಕತ್ತರಿಸುವುದಿಲ್ಲ. ಗುರುವಾರದಂದು ನೆರೆಹೊರೆಯವರು ಮತ್ತು ಕುತೂಹಲದಿಂದ ನೆರೆದಿದ್ದ ಜನರ ಸಮ್ಮುಖದಲ್ಲಿ, ಬರ್ಮನ್ ತಮ್ಮ ಮನೆಯ ಬಳಿಯೇ ಕೇಶ ಮುಂಡನ ಮಾಡಿಸಿಕೊಂಡರು.

ಪ್ರತಿಜ್ಞೆಯ ಹಿಂದಿನ ಕಥೆ

ಇಟ್ಟಿಗೆ ಭಟ್ಟಿಯಲ್ಲಿ ವಲಸೆ ಕಾರ್ಮಿಕರಾಗಿ ಕೆಲಸ ಮಾಡುವ ಬರ್ಮನ್ ಅವರು ಈ ಭಾಗದಲ್ಲಿ ಬಿಜೆಪಿ ಬೆಂಬಲಿಗರೆಂದು ಗುರುತಿಸಿಕೊಂಡಿದ್ದಾರೆ. ಸುಮಾರು ಒಂದೂವರೆ ದಶಕದ ಕಾಲ ಅವರು ತಮ್ಮ ಪ್ರತಿಜ್ಞೆಯನ್ನು ಉಳಿಸಿಕೊಂಡು ಬಂದಿದ್ದರು. ತೃಣಮೂಲ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ನಾನು ಕ್ಷೌರದಂಗಡಿಯ ಹೊಸ್ತಿಲನ್ನು ತುಳಿದಿಲ್ಲ ಎಂದು ಅವರು ಹೆಮ್ಮೆಯಿಂದ ಹೇಳುತ್ತಾರೆ.

ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟವಾದ ದಿನ ಬೆಳಗ್ಗಿನಿಂದಲೇ ನಾನು ಟಿವಿಯನ್ನೇ ನೋಡುತ್ತಿದ್ದೆ. ಬಿಜೆಪಿ 100 ಸ್ಥಾನಗಳ ಗಡಿ ದಾಟುತ್ತಿದ್ದಂತೆ ನನ್ನ ಸಂತೋಷಕ್ಕೆ ಪಾರವೇ ಇರಲಿಲ್ಲ. ಇಂದು ನಾನು ನಿಜಕ್ಕೂ ತುಂಬಾ ಸಂತೋಷವಾಗಿದ್ದೇನೆ,” ಎಂದು ಬರ್ಮನ್ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಇನ್ನು ಮುಂದೆ ತಾವು ಸಾಮಾನ್ಯ ಜೀವನಕ್ಕೆ ಮರಳುವುದಾಗಿ ತಿಳಿಸಿದ ಅವರು, “ಈಗ ಬಿಜೆಪಿ ಅಧಿಕಾರಕ್ಕೆ ಬಂದಿದೆ, ಹೊಸ ಕೂದಲು ಬೆಳೆಯುತ್ತದೆ. ಇನ್ನು ಮುಂದೆ ನಾನು ಯಾವಾಗ ಬೇಕಾದರೂ ಕೂದಲನ್ನು ಕತ್ತರಿಸಿಕೊಳ್ಳಬಹುದು ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now