Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನ್ನಡದಲ್ಲೂ ರೈಲ್ವೆ ಇಲಾಖೆ ಬಡ್ತಿ ಪರೀಕ್ಷೆಗಳನ್ನು ನಡೆಸಿ : ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಪತ್ರ

---Advertisement---

ಸುದ್ದಿಒನ್,ಬೆಂಗಳೂರು,ಮೇ.08:ನೈಋತ್ಯ ರೈಲ್ವೆ (SWR) ಇಲಾಖೆಯ ಬಡ್ತಿ ಪರೀಕ್ಷೆಗಳನ್ನು ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಿಗೆ ಸೀಮಿತಗೊಳಿಸಿರುವುದನ್ನು ಯುವ ಜನತಾದಳ (ಜಾತ್ಯತೀತ) ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಆಗಸ್ಟ್ 2024ರ ರೈಲ್ವೆ ಮಂಡಳಿಯ ಆದೇಶದಂತೆ ಪ್ರಾದೇಶಿಕ ಭಾಷೆಗಳಿಗೆ ಅವಕಾಶ ನೀಡಲೇಬೇಕು. ಈ ತಾರತಮ್ಯವನ್ನು ಸರಿಪಡಿಸುವಂತೆ ಕೋರಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಪತ್ರ ಬರೆದು ಆಗ್ರಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now