Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ನಾಳೆ ಬಿಎಸ್‌ವೈ ‘ಅಭಿಮಾನೋತ್ಸವ’ದ ಸಂಭ್ರಮ: ವಾಹನ ನಿಲುಗಡೆಗೆ ಕ್ಯೂಆರ್ ಕೋಡ್ ವ್ಯವಸ್ಥೆ

---Advertisement---

ಸುದ್ದಿಒನ್, ಚಿತ್ರದುರ್ಗ,ಮೇ.08: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸಾರ್ಥಕ ಸೇವೆಯ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಐತಿಹಾಸಿಕ ‘ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕೋಟೆನಾಡು ಚಿತ್ರದುರ್ಗ ಸಜ್ಜಾಗಿದೆ.

ನಾಳೆ, (ಮೇ 9ರ ಶನಿವಾರ) ಮಧ್ಯಾಹ್ನ 1:00 ಗಂಟೆಗೆ ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ವಿವಿಧ ಮೂಲೆಗಳಿಂದ ಲಕ್ಷಾಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಆಗಮಿಸುವ ನಿರೀಕ್ಷೆಯಿದೆ.

ಸುಗಮ ಸಂಚಾರಕ್ಕೆ ವಿಶೇಷ ಕ್ರಮ :

ಕಾರ್ಯಕ್ರಮಕ್ಕೆ ಬರುವ ಅಭಿಮಾನಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಂಚಾರ ವ್ಯವಸ್ಥೆಯಲ್ಲಿ ಅಚ್ಚುಕಟ್ಟು ಕ್ರಮ ಕೈಗೊಳ್ಳಲಾಗಿದೆ. ವಾಹನಗಳ ನಿಲುಗಡೆಗೆ (Parking) ಸಂಬಂಧಿಸಿದ ಮಾಹಿತಿಯನ್ನು ಸುಲಭವಾಗಿ ಪಡೆಯಲು ಬಿಜೆಪಿ ವತಿಯಿಂದ ಕ್ಯೂಆರ್ ಕೋಡ್ (QR Code) ಬಿಡುಗಡೆ ಮಾಡಲಾಗಿದೆ.

ಮಾಹಿತಿ ಪಡೆಯುವುದು ಹೇಗೆ?
ಪೋಸ್ಟರ್‌ನಲ್ಲಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ನಿಗದಿತ ಪಾರ್ಕಿಂಗ್ ಸ್ಥಳಗಳ ವಿವರ ಮತ್ತು ಲೊಕೇಶನ್ ಮಾಹಿತಿಯನ್ನು ನಿಮ್ಮ ಮೊಬೈಲ್‌ನಲ್ಲಿ ಪಡೆಯಬಹುದು.

ಸ್ಥಳ: ಮಾದಾರ ಚೆನ್ನಯ್ಯ ಗುರುಪೀಠದ ಪಕ್ಕದ ಮೈದಾನ, ಚಿತ್ರದುರ್ಗ.

ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣವನ್ನು ಸಂಭ್ರಮಿಸಲು ಈ ಕಾರ್ಯಕ್ರಮವು ಸಾಕ್ಷಿಯಾಗಲಿದ್ದು, ಬಿಜೆಪಿ ನಾಯಕರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...