ಬೆಂಗಳೂರು ನಗರದ ಶ್ರೀಗಂಧನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಮೃತನ ಕುಟುಂಬಸ್ಥರು ಸಾವಿನ ಹಿಂದೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ಚಿತ್ರದುರ್ಗ ಮೂಲದ 28 ವರ್ಷದ ತಿಪ್ಪೇಸ್ವಾಮಿ ಮೃತಪಟ್ಟ ಯುವಕನಾಗಿದ್ದು, ಆತ ಬೆಂಗಳೂರಿನ ಖಾಸಗಿ ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಈ ವೇಳೆ ದಾವಣಗೆರೆ ಮೂಲದ ಮಹಿಳೆಯೊಬ್ಬಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದು, ಬಳಿಕ ಇಬ್ಬರೂ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಾ ಆಪ್ತರಾಗಿದ್ದರು. ಕಳೆದ ಎರಡು ತಿಂಗಳಿನಿಂದ ಶ್ರೀಗಂಧನಗರದ ಬಾಡಿಗೆ ಮನೆಯಲ್ಲಿ ಇಬ್ಬರೂ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ಆ ಮಹಿಳೆ ಈಗಾಗಲೇ ವಿವಾಹಿತೆಯಾಗಿದ್ದು, ತನ್ನ ಪತಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ತಿಪ್ಪೇಸ್ವಾಮಿ ಜೊತೆ ವಾಸಿಸುತ್ತಿದ್ದಳು ಎನ್ನಲಾಗಿದೆ. ಮನೆ ಮಾಲೀಕರಿಗೆ ತಾವು ಗಂಡ-ಹೆಂಡತಿ ಎಂದು ಪರಿಚಯಿಸಿಕೊಂಡಿದ್ದ ಜೋಡಿ, ತಿಂಗಳಿಗೆ ಸುಮಾರು ಮೂರು ಸಾವಿರ ರೂಪಾಯಿ ಬಾಡಿಗೆ ನೀಡಿ ನೆಲೆಸಿದ್ದರು.
ಇತ್ತೀಚಿನ ದಿನಗಳಲ್ಲಿ ಇವರಿಬ್ಬರ ನಡುವೆ ಆಗಾಗ ಕಲಹ ಉಂಟಾಗುತ್ತಿತ್ತು ಎನ್ನಲಾಗಿದೆ. “ನನ್ನನ್ನು ನೋಡಿಕೊಳ್ಳಲು ಸಾಧ್ಯವಿಲ್ಲ, ನನ್ನನ್ನು ಬಿಟ್ಟುಬಿಡು” ಎಂದು ಮಹಿಳೆ ತಿಪ್ಪೇಸ್ವಾಮಿಗೆ ಮಾನಸಿಕ ಒತ್ತಡ ನೀಡುತ್ತಿದ್ದಳು ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಮೃತನ ಕುಟುಂಬಸ್ಥರು ಪ್ರಿಯಾಂಕಾ ಎಂಬ ಮಹಿಳೆಯೇ ಸಾವಿಗೆ ಕಾರಣ ಎಂದು ಆರೋಪಿಸಿ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸದ್ಯ ನಾಪತ್ತೆಯಾಗಿರುವ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಮುಂದುವರಿದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












