Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಡಿತರ ಚೀಟಿ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಆರಂಭ: ಸಾರ್ವಜನಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

---Advertisement---

ಸುದ್ದಿಒನ್,ಬೆಂಗಳೂರು,ಮೇ.09:ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯಾದ್ಯಂತ ಪಡಿತರ ಚೀಟಿ (Ration Card) ತಿದ್ದುಪಡಿ ಹಾಗೂ ಹೊಸ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಅಧಿಕೃತವಾಗಿ ಆರಂಭಗೊಂಡಿದೆ.

ಇ-ಶ್ರಮ (E-Shram), ಪಿವಿಟಿಜಿ (PVTG) ಹಾಗೂ ವೈದ್ಯಕೀಯ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮತ್ತು ಅನುಮೋದನೆ ಮಾಡ್ಯೂಲ್‌ಗಳನ್ನು ಸಕ್ರಿಯಗೊಳಿಸಲಾಗಿದೆ. ಇದರೊಂದಿಗೆ GSC/ತಿದ್ದುಪಡಿ ಅರ್ಜಿ ಸಲ್ಲಿಕೆ ಮತ್ತು ಅನುಮೋದನೆ ಪ್ರಕ್ರಿಯೆಯೂ ಸಹ ಎಲ್ಲಾ ಮೂರು ಸರ್ವರ್‌ ಗಳಲ್ಲಿ ಲಭ್ಯವಿದೆ.ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಮೇ 08, 2026 ರಿಂದ ಮಾರ್ಚ್ 31, 2027 ರವರೆಗೆ ಅವಕಾಶವಿರುತ್ತದೆ. ಅರ್ಜಿಗಳನ್ನು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಸಲ್ಲಿಸಬಹುದು.

ಹೊಸ ಪಡಿತರ ಚೀಟಿ FI ಅನುಮೋದನೆ: ಮೇ 08, 2026 ರಿಂದ ಮಾರ್ಚ್ 31, 2027 ರವರೆಗೆ, ಬೆಳಗ್ಗೆ 10:00 ರಿಂದ ರಾತ್ರಿ 09:00 ಗಂಟೆಯವರೆಗೆ ಈ ಪ್ರಕ್ರಿಯೆ ನಡೆಯಲಿದೆ.

GSC / ತಿದ್ದುಪಡಿ ಅರ್ಜಿ ಸಲ್ಲಿಕೆ: ರೇಷನ್ ಕಾರ್ಡ್ ತಿದ್ದುಪಡಿಗಾಗಿ ಮೇ 08, 2026 ರಿಂದ ಮಾರ್ಚ್ 31, 2027 ರವರೆಗೆ ಸಮಯ ನೀಡಲಾಗಿದೆ. ಸಾರ್ವಜನಿಕರು ಬೆಳಗ್ಗೆ 10:00 ರಿಂದ ಸಂಜೆ 05:00 ರ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. GSC / ತಿದ್ದುಪಡಿ FI ಅನುಮೋದನೆ: ತಿದ್ದುಪಡಿ ಅರ್ಜಿಗಳ ಅನುಮೋದನೆಯು ಮೇ 08, 2026 ರಿಂದ ಮಾರ್ಚ್ 31, 2027 ರವರೆಗೆ, ಬೆಳಗ್ಗೆ 10:00 ರಿಂದ ರಾತ್ರಿ 09:00 ಗಂಟೆಯವರೆಗೆ ನಡೆಯಲಿದೆ.

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...