ಸುದ್ದಿಒನ್, ಚಿತ್ರದುರ್ಗ. (ಮೇ.10): ರಾಜ್ಯದ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ. ಸುಧಾಕರ್ (65 ವರ್ಷ) ಅವರು ಇಂದು ಬೆಳಿಗ್ಗೆ 3:15 ಕ್ಕೆ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ

ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು. ಮೊಣಕಾಲು ಶಸ್ತ್ರಚಿಕಿತ್ಸೆಗೆಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಳಿಕ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರ ಸುದೀರ್ಘ ಚಿಕಿತ್ಸೆಯ ಬಳಿಕವೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

















