Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

‘ಬಡವರ ಬಂಧು’ ಡಿ. ಸುಧಾಕರ್‌ಬಗ್ಗೆ ಇಲ್ಲಿದೆ ಹಲವು ಸಂಗತಿ

---Advertisement---

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಸುಮಾರು 3:15ಕ್ಕೆ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ಚಿತ್ರದುರ್ಗ ಜಿಲ್ಲೆ ಸೇರಿದಂತೆ ರಾಜ್ಯ ರಾಜಕೀಯ ವಲಯದಲ್ಲಿ ಆಘಾತ ಮೂಡಿಸಿದೆ.

1961ರ ಮಾರ್ಚ್ 28ರಂದು ಜನಿಸಿದ ಡಿ. ಸುಧಾಕರ್ ಅವರು ಸಾಮಾನ್ಯ ಕುಟುಂಬ ಹಿನ್ನೆಲೆಯಿಂದ ರಾಜಕೀಯ ಕ್ಷೇತ್ರಕ್ಕೆ ಬಂದವರು. ಸಹಕಾರ ಕ್ಷೇತ್ರದ ಮೂಲಕ ಜನಸೇವೆ ಆರಂಭಿಸಿದ ಅವರು, ಬಳಿಕ ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ನಾಯಕರಾಗಿ ಬೆಳೆದರು. ಕಳೆದ ಎರಡು ದಶಕಗಳ ಕಾಲ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (DCC Bank) ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಸಾವಿರಾರು ರೈತರು, ಮಹಿಳಾ ಸಂಘಗಳು ಹಾಗೂ ಬಡ ಕುಟುಂಬಗಳಿಗೆ ನೆರವಾಗಿದ್ದರು.

ಸಹಕಾರ ಕ್ಷೇತ್ರದಲ್ಲಿ ಕಟ್ಟಿಕೊಂಡ ಜನಬೆಂಬಲವೇ ಅವರನ್ನು ಚುನಾವಣಾ ರಾಜಕೀಯಕ್ಕೆ ಕರೆತಂದಿತು. 2004ರಲ್ಲಿ ಕಾಂಗ್ರೆಸ್ ಪಕ್ಷದಿಂದ ಚಳ್ಳಕೆರೆ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗುವ ಮೂಲಕ ವಿಧಾನಸಭೆಗೆ ಪ್ರವೇಶಿಸಿದರು. ನಂತರ ಚಳ್ಳಕೆರೆ ಕ್ಷೇತ್ರ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದರಿಂದ ಸಾಮಾನ್ಯ ಕ್ಷೇತ್ರವಾದ ಹಿರಿಯೂರಿಗೆ ರಾಜಕೀಯ ಪಯಣ ಮುಂದುವರಿಸಿದರು.
2008ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದರು.

ಬಳಿಕ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿ ಸಮಾಜ ಕಲ್ಯಾಣ ಸಚಿವರಾಗಿಯೂ ಸೇವೆ ಸಲ್ಲಿಸಿದರು.
2013ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಸೇರಿ ಹಿರಿಯೂರು ಕ್ಷೇತ್ರದಿಂದ ಜಯಗಳಿಸಿದರು. ಆದರೆ 2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಸೋಲು ಅನುಭವಿಸಿದರು. ಆದರೂ ಜನಸಂಪರ್ಕ ಕಡಿತಗೊಳಿಸದ ಸುಧಾಕರ್, 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರು ಆಯ್ಕೆಯಾಗಿದ್ದು, ಬಳಿಕ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು.

ಚಳ್ಳಕೆರೆ ಹಾಗೂ ಹಿರಿಯೂರು ಕ್ಷೇತ್ರಗಳಲ್ಲಿ ಜೈನ ಸಮುದಾಯದ ಮತಗಳು ಅತಿ ಕಡಿಮೆ ಇದ್ದರೂ, ಎಲ್ಲಾ ಸಮುದಾಯಗಳ ಪ್ರೀತಿ ಮತ್ತು ವಿಶ್ವಾಸ ಗಳಿಸಿದ್ದ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ.
ಡಿ. ಸುಧಾಕರ್ ಅವರನ್ನು ಜನರು “ಬಡವರ ಬಂಧು” ಎಂದೇ ಕರೆಯುತ್ತಿದ್ದರು. ಅಧಿಕಾರದಲ್ಲಿದ್ದಾಗ ಮಾತ್ರವಲ್ಲ, ಅಧಿಕಾರದ ಹೊರಗಿದ್ದ ಸಂದರ್ಭದಲ್ಲೂ ಅಪಾರ ಜನರಿಗೆ ನೆರವಾಗುತ್ತಿದ್ದರು. ವೈದ್ಯಕೀಯ ನೆರವು, ಶಿಕ್ಷಣ, ಮಹಿಳಾ ಸಂಘಗಳಿಗೆ ಸಾಲ ಸೌಲಭ್ಯ, ರೈತರ ಸಮಸ್ಯೆಗಳಿಗೆ ಸ್ಪಂದನೆ – ಇವೆಲ್ಲದರ ಮೂಲಕ ಜನಮನ ಗೆದ್ದಿದ್ದರು.

ಅವರ ಸರಳತೆ, ಸ್ನೇಹಪರ ವ್ಯಕ್ತಿತ್ವ ಮತ್ತು ಸಹಾಯ ಮನೋಭಾವದಿಂದ ರಾಜಕೀಯ ಭೇದವಿಲ್ಲದೆ ಎಲ್ಲರೊಂದಿಗೂ ಉತ್ತಮ ಸಂಬಂಧ ಹೊಂದಿದ್ದರು. ಅವರ ಅಗಲಿಕೆಯಿಂದ ಚಿತ್ರದುರ್ಗ ಜಿಲ್ಲೆಯ ರಾಜಕೀಯದಲ್ಲಿ ತುಂಬಲಾರದ ಶೂನ್ಯ ಉಂಟಾಗಿದೆ ಎಂದು ನಾಯಕರು ಹಾಗೂ ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now