Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಬಿಜೆಪಿ ಪವರ್ ಶೋ: ಅಮಿತ್ ಶಾ ಎದುರು ಬಿಎಸ್‌ವೈಗೆ ಭಾರೀ ಜನಬೆಂಬಲ

---Advertisement---

ಮಾಜಿ ಮುಖ್ಯಮಂತ್ರಿ  ಯಡಿಯೂರಪ್ಪ ಅವರ ರಾಜಕೀಯ ಜೀವನದ 50 ವರ್ಷದ ಸಾಧನೆ ಅಂಗವಾಗಿ ಚಿತ್ರದುರ್ಗ ನಗರದ ಹೊರವಲಯದ ಮದಾರ ಚೆನ್ನಯ್ಯ ಗುರುಪೀಠದ ಸಮೀಪ ಶನಿವಾರ ಅದ್ಧೂರಿಯಾಗಿ ‘ಬಿಎಸ್‌ವೈ ಅಭಿಮಾನೋತ್ಸವ’ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಅಭಿಮಾನಿಗಳು ಹರಿದುಬಂದು ಕಾರ್ಯಕ್ರಮವನ್ನು ಭವ್ಯ ಜನಸಾಗರವಾಗಿ ಪರಿವರ್ತಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳು, ಹಿರಿಯ ಬಿಜೆಪಿ ನಾಯಕರು ಹಾಗೂ ನಾಡಿನ ಅನೇಕ ಮಠಾಧೀಶರು ಭಾಗವಹಿಸಿದ್ದರು. ವೇದಿಕೆಯ ಸುತ್ತ ಅಭಿಮಾನಿಗಳ ಸಂಭ್ರಮ ಕಳೆಗಟ್ಟಿದ್ದು, ಎಲ್ಲೆಡೆ ಜೈಕಾರಗಳು ಮೊಳಗಿದವು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಂದ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರಿಂದ ನಗರ ಮತ್ತು ಹೊರವಲಯದ ಹೆದ್ದಾರಿಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಯಿತು. ಸುಮಾರು 40 ಕಿಲೋಮೀಟರ್ ವ್ಯಾಪ್ತಿವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡುಬಂತು. ಅಭಿಮಾನಿಗಳನ್ನು ನಿಯಂತ್ರಿಸಿ ಸಂಚಾರ ಸುಗಮಗೊಳಿಸಲು ಪೊಲೀಸರು ಮತ್ತು ಸ್ವಯಂಸೇವಕರು ಹರಸಾಹಸ ಪಟ್ಟರು.

ಕಾರ್ಯಕ್ರಮದ ಮೈದಾನದಲ್ಲಿ ಅಭಿಮಾನಿಗಳಿಗಾಗಿ ಭರ್ಜರಿ ಊಟ ಹಾಗೂ ತಿಂಡಿ ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆ ಉಪ್ಪಿಟ್ಟು, ಕೇಸರಿಬಾತ್, ಇಡ್ಲಿ, ವಡೆ, ಸಾಂಬಾರ್ ವಿತರಿಸಲಾಯಿತು. ಬಳಿಕ ಟೊಮ್ಯಾಟೋ ಬಾತ್, ಪಲಾವ್, ಮೊಸರನ್ನ ಹಾಗೂ ಮೈಸೂರುಪಾಕ್ ನೀಡಲಾಯಿತು. ಸಾವಿರಾರು ಜನರು ಊಟ ಸವಿದು ಸಂತೋಷ ವ್ಯಕ್ತಪಡಿಸಿದರು.ಇದಲ್ಲದೆ ಪೆಂಡಾಲ್‌ನೊಳಗಿನ ಜನರಿಗೆ ಬ್ರೆಡ್, ದಿಲ್‌ಕುಷ್, ಬಾಳೆಹಣ್ಣು, ನೀರಿನ ಬಾಟಲ್‌ಗಳು ಹಾಗೂ ಮಜ್ಜಿಗೆ ಪ್ಯಾಕೆಟ್‌ಗಳನ್ನು ಕುಳಿತಲ್ಲೇ ವಿತರಿಸಲಾಯಿತು. ಬಿಸಿಲಿನ ತಾಪದಿಂದ ರಕ್ಷಿಸಲು ಬೃಹತ್ ಫ್ಯಾನ್‌ಗಳು ಮತ್ತು ಏರ್ ಕೂಲರ್‌ಗಳನ್ನು ಅಳವಡಿಸಲಾಗಿತ್ತು.

ಕಾರ್ಯಕ್ರಮದ ಸಿದ್ಧತೆಗಾಗಿ ಕಳೆದ 15 ದಿನಗಳಿಂದ ಸುಮಾರು 3 ಸಾವಿರಕ್ಕೂ ಹೆಚ್ಚು ಸ್ವಯಂಸೇವಕರು ವಿವಿಧ ಸಮಿತಿಗಳ ಮೂಲಕ ಕಾರ್ಯನಿರ್ವಹಿಸಿದ್ದರು. ಹಲವಾರು ಹಾಲಿ ಹಾಗೂ ಮಾಜಿ ಶಾಸಕರು ಜವಾಬ್ದಾರಿ ಹಂಚಿಕೊಂಡು ವ್ಯವಸ್ಥೆ ನೋಡಿಕೊಂಡರು.
ಕಾರ್ಯಕ್ರಮದ ವೇಳೆ ಅಭಿಮಾನಿಗಳು ನಾಯಕರಿಗೆ ಜೈಕಾರ ಹಾಕಿ ಸಂಭ್ರಮಿಸಿದರು. ವಿಶೇಷವಾಗಿ ಅಮಿತ್ ಶಾ ಭಾಷಣದ ವೇಳೆ “ಮೋದಿ.. ಮೋದಿ..” ಘೋಷಣೆಗಳು ಮೊಳಗಿದವು. ಚಿತ್ರದುರ್ಗದಲ್ಲಿ ನಡೆದ ಈ ಅಭಿಮಾನೋತ್ಸವ ರಾಜ್ಯ ರಾಜಕೀಯದಲ್ಲಿ ಗಮನ ಸೆಳೆದ ಭವ್ಯ ಸಮಾವೇಶವಾಗಿ ಪರಿಣಮಿಸಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now