Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಸುಧಾಕರ್ ನಿಧನ ; ಡಾ.ಡಿ.ವೀರೇಂದ್ರ ಹೆಗಡೆ ಸಂತಾಪ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 10 : ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‍ರವರ ನಿಧನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆರವರು ಅತೀವ ಸಂತಾಪ ಸೂಚಿಸಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿ ಎರಡು ಬಾರಿ ಸಚಿವರಾಗಿದ್ದ ಡಿ.ಸುಧಾಕರ್ ರಾಜಕೀಯದಲ್ಲಿ ಅಪಾರ ಅನುಭವ ಹೊಂದಿದ್ದರು. ಅಲ್ಪಕಾಲದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಧರ್ಮಸ್ಥಳದ ಅಪಾರ ಅಭಿಮಾನಿಯೂ ಭಕ್ತರಾಗಿದ್ದರು. ಅನೇಕ ಬಾರಿ ಇಲ್ಲಿಗೆ ಬಂದು ಮಂಜುನಾಥಸ್ವಾಮಿಯ ದರ್ಶನ ಪಡೆದು ನನ್ನೊಂದಿಗೆ ಚರ್ಚಿಸಿ ಹೋಗುತ್ತಿದ್ದ ಡಿ.ಸುಧಾಕರ್ ಇತ್ತೀಚೆಗೆ ನಮ್ಮ ಆನೆ ಮರಿ ಶಿವಾನಿಯ ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದನ್ನು ಮರೆಯುವಂತಿಲ್ಲ. ರಾಜ್ಯ ಸರ್ಕಾರ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷದ ವರಿಷ್ಟರೊಂದಿಗೆ ಸೌಹಾರ್ಧಯುತ ಸಂಪರ್ಕವಿಟ್ಟುಕೊಂಡಿದ್ದರಲ್ಲದೆ ಎಲ್ಲಾ ಜಾತಿ ಜನಾಂಗದವರ ಪ್ರೀತಿ ವಿಶ್ವಾಸ ಗಳಿಸಿದ್ದರು ಎಂದು ಸ್ಮರಿಸಿದ್ದಾರೆ.

ಧರ್ಮಸ್ಥಳದಲ್ಲಿ ನಡೆದ ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕದ ಸಮಿತಿ ಸಭೆಗಳಲ್ಲಿ ಭಾಗವಹಿಸಿ ಮಸ್ತಕಾಭಿಷೇಕದ ಯಶಸ್ಸಿಗೆ ಕಾರಣರಾಗಿದ್ದ ಡಿ.ಸುಧಾಕರ್‍ರವರ ಅಗಲಿಕೆ ಎಲ್ಲರಿಗೂ ನೋವುಂಟಾಗಿದ್ದು, ದುಃಖತಪ್ತ ಕುಟುಂಬಕ್ಕೆ ಶಾಂತಿ ಕರುಣಿಸಲಿ ಎಂದು ಡಿ.ವೀರೇಂದ್ರ ಹೆಗಡೆರವರು ಮಂಜುನಾಥಸ್ವಾಮಿಯಲ್ಲಿ ಪ್ರಾರ್ಥಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...