Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಡಿ. ಸುಧಾಕರ್ ನಿಧನ : ಸಂಸದ ಗೋವಿಂದ ಎಂ. ಕಾರಜೋಳ ಸಂತಾಪ

---Advertisement---

 

ಚಿತ್ರದುರ್ಗ .ಮೇ.10: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಸದ ಗೋವಿಂದ ಎಂ. ಕಾರಜೋಳ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ನಿಧನದ ಸುದ್ದಿಯನ್ನು ನಂಬಲು ಅಸಾಧ್ಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸುಧಾಕರ್ ಅವರು ಒಬ್ಬ ಸಜ್ಜನ ರಾಜಕಾರಣಿಯಾಗಿದ್ದರು. ಸಮಾಜದಲ್ಲಿ ಎಲ್ಲರೊಂದಿಗೆ ಬೆರೆತು, ಜನರ ಪ್ರೀತಿಗೆ ಪಾತ್ರರಾಗಿದ್ದವರು. ಇಂತಹ ಜನಪ್ರಿಯ ವ್ಯಕ್ತಿ ಇಂದು ನಮ್ಮನ್ನು ಅಗಲಿರುವುದು ಇಡೀ ಜಿಲ್ಲೆಗೆ ತುಂಬಲಾರದ ನಷ್ಟವಾಗಿದೆ ಎಂದರು.

ಸುಧಾಕರ್ ಅವರೊಂದಿಗೆ ಕೆಲಸ ಮಾಡಿದ ದಿನಗಳನ್ನು ನೆನಪಿಸಿಕೊಂಡ ಕಾರಜೋಳ, “ನಾನು ಸಚಿವನಾಗಿದ್ದಾಗ ಅವರು ಕೂಡ ನನ್ನ ಸಹೋದ್ಯೋಗಿಯಾಗಿ ಕೆಲಸ ಮಾಡಿದ್ದರು. ಅವರ ಸೌಮ್ಯ ಸ್ವಭಾವ ಮತ್ತು ಕಾರ್ಯವೈಖರಿ ಎಲ್ಲರಿಗೂ ಮಾದರಿಯಾಗಿತ್ತು. ರಾಜಕಾರಣದಲ್ಲಿ ಇರುವವರು ಸಮಾಜಕ್ಕೆ ಮಾದರಿಯಾಗಿ ಬದುಕಬೇಕು ಎನ್ನುವ ತತ್ವಕ್ಕೆ ಅವರು ಕನ್ನಡಿಯಂತಿದ್ದರು ಎಂದರು.

ಸಾವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಸುಧಾಕರ್ ಅವರು ಈ ವಯಸ್ಸಿನಲ್ಲೇ ನಮ್ಮನ್ನು ಅಗಲಬಾರದಿತ್ತು. ಅವರಿಗೆ ಕೇವಲ 62 ವರ್ಷ ವಯಸ್ಸಾಗಿತ್ತು. ಇದು ಸಾವು ಬರುವಂತಹ ವಯಸ್ಸಲ್ಲ ಎಂದು ಭಾವುಕರಾದರು.

ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದರು. ಅವರು ಸಮಾಜಕ್ಕಾಗಿ ಹಾಕಿಕೊಟ್ಟ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುವುದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಕಾರಜೋಳ ಅವರು ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now