Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಸುಧಾಕರ್ ನಿಧನ | ನಾಳೆ ಸರ್ಕಾರಿ ರಜೆ ಘೋಷಣೆ ; ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ…!

---Advertisement---

 

ಚಿತ್ರದುರ್ಗ, ಮೇ 10:  ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿವಂಗತ ಡಿ.ಸುಧಾಕರ್ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಚಿತ್ರದುರ್ಗ ಜಿಲ್ಲೆಗೆ ಜಿಲ್ಲಾಡಳಿತ ರಜೆ ಘೋಷಿಸಿದ್ದರೂ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳು, ಶಾಲೆ-ಕಾಲೇಜುಗಳಿಗೆ ರಜೆ ಅನ್ವಯವಾಗಿದ್ದರೂ, ಸಾರ್ವಜನಿಕ ಪರೀಕ್ಷೆಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಪಿಯು ಉಪನಿರ್ದೇಶಕರು    (PU DD) ತಿಳಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೀಡಾಗದೇ ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಮನವಿ ಮಾಡಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಪರೀಕ್ಷೆಗಳು ಎಂದಿನಂತೆ ಸುಗಮವಾಗಿ ನಡೆಯಲಿವೆ. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸುವ ವಿದ್ಯಾರ್ಥಿಗಳು ಸಂಚಾರ ಹಾಗೂ ಸಮಯದ ಬಗ್ಗೆ ಮುಂಚಿತವಾಗಿ ಗಮನಹರಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಈಗಾಗಲೇ ರಾಜ್ಯಾದ್ಯಂತ ನಡೆಯುತ್ತಿದ್ದು, ನಾಳೆಯ ಪರೀಕ್ಷೆಯೂ ಪೂರ್ವನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಇಲಾಖೆ ಪುನರುಚ್ಚರಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...