Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮೀಣ ಉದ್ಯೋಗದಲ್ಲಿ ಹೊಸ ಕ್ರಾಂತಿ: ಜುಲೈ 1ರಿಂದ ‘ವಿಕಸಿತ್ ಭಾರತ್-G RAM G’ ಜಾರಿ

---Advertisement---

ಸುದ್ದಿಒನ್,ಭೋಪಾಲ್,ಮೇ.11: ಗ್ರಾಮೀಣ ಭಾರತದ ಆರ್ಥಿಕತೆಯನ್ನು ಬಲಪಡಿಸಲು ಕೇಂದ್ರ ಸರ್ಕಾರವು ಅತ್ಯಂತ ಮಹತ್ವಾಕಾಂಕ್ಷೆಯ ‘ವಿಕಸಿತ್ ಭಾರತ್-G RAM G’ (Viksit Bharat-G RAM G) ಕಾಯ್ದೆಯನ್ನು ಜಾರಿಗೆ ತರುತ್ತಿದೆ. ಈ ಕುರಿತು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹೊಸ ಕಾಯ್ದೆಯು ಜುಲೈ 1, 2026 ರಿಂದ ದೇಶಾದ್ಯಂತ ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ತಿಳಿಸಿದರು.

ಇದುವರೆಗೆ ಜಾರಿಯಲ್ಲಿದ್ದ ನರೇಗಾ (MGNREGA) ಯೋಜನೆಯಡಿ ವರ್ಷಕ್ಕೆ 100 ದಿನಗಳ ಉದ್ಯೋಗ ನೀಡಲಾಗುತ್ತಿತ್ತು. ಆದರೆ, ಹೊಸ ಕಾಯ್ದೆಯ ಪ್ರಕಾರ ಇನ್ನು ಮುಂದೆ ಗ್ರಾಮೀಣ ಜನರಿಗೆ ವರ್ಷಕ್ಕೆ 125 ದಿನಗಳ ಕಾಲ ಕೆಲಸದ ಖಾತರಿ ನೀಡಲಾಗುವುದು. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಬರೋಬ್ಬರಿ 95,692 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ.

ಪ್ರಸ್ತುತ ಚಾಲ್ತಿಯಲ್ಲಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಬದಲಿಗೆ ಈ ಹೊಸ ಕಾಯ್ದೆ ಅಸ್ತಿತ್ವಕ್ಕೆ ಬರಲಿದೆ. ಜುಲೈ 1 ರವರೆಗೆ ಹಳೆಯ ನಿಯಮಗಳೇ ಜಾರಿಯಲ್ಲಿರುತ್ತವೆ. ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಹಳೆಯ ಯೋಜನೆಯಡಿಯಲ್ಲೇ ಪೂರ್ಣಗೊಳಿಸಲು ಸೂಚಿಸಲಾಗಿದೆ.

ರಾಜ್ಯ ಸರ್ಕಾರಗಳಿಗೆ ಈ ಹೊಸ ವ್ಯವಸ್ಥೆಗೆ ಹೊಂದಿಕೊಳ್ಳಲು ಆರು ತಿಂಗಳ ಕಾಲಾವಕಾಶ ನೀಡಲಾಗಿದೆ. ಒಂದು ವೇಳೆ ಜುಲೈ 1ರ ನಂತರವೂ ಯಾವುದೇ ರಾಜ್ಯ ಸಿದ್ಧವಾಗಿಲ್ಲದಿದ್ದರೂ, ಕೇಂದ್ರದಿಂದ ಬಿಡುಗಡೆಯಾಗುವ ಅನುದಾನ ಮಾತ್ರ ‘ವಿಕಸಿತ್ ಭಾರತ್-G RAM G’ ನಿಯಮಗಳ ಅನ್ವಯವೇ ಹಂಚಿಕೆಯಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...