ಸುದ್ದಿಒನ್,ಬೆಂಗಳೂರು,ಮೇ.13: ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನ ಸರಿಸುಮಾರು 23 ಲಕ್ಷ ಆಸ್ತಿ ಮಾಲೀಕರಿಗೆ ಅನುಕೂಲವಾಗುವಂತೆ ‘ನಮ್ಮ ಖಾತೆ – ನಮ್ಮ ಹಕ್ಕು’ ಎಂಬ ಬೃಹತ್ ಅಭಿಯಾನಕ್ಕೆ ಸರ್ಕಾರ ಚಾಲನೆ ನೀಡಿದ್ದು, ಆಸ್ತಿ ದಾಖಲೆಗಳನ್ನು ನೇರವಾಗಿ ಮನೆ ಬಾಗಿಲಿಗೆ ತಲುಪಿಸುವ ‘ಭೂ ಗ್ಯಾರಂಟಿ’ ಯೋಜನೆಯನ್ನು ಘೋಷಿಸಿದೆ.
ಈ ಯೋಜನೆಯ ಅಡಿಯಲ್ಲಿ ಅತ್ಯಂತ ಪ್ರಮುಖ ಅಂಶವೆಂದರೆ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆ ಮಾಡಿಕೊಳ್ಳುವ ಶುಲ್ಕದಲ್ಲಿ ನೀಡಿರುವ ಭಾರಿ ರಿಯಾಯಿತಿ.
ಹಳೆಯ ಶುಲ್ಕ: ಆಸ್ತಿಯ ಗೈಡೆನ್ಸ್ ವ್ಯಾಲ್ಯೂನ ಶೇ. 5ರಷ್ಟು.
ಹೊಸ ಶುಲ್ಕ: ಕೇವಲ ಶೇ. 2ರಷ್ಟು ಮಾತ್ರ.
ಈ ರಿಯಾಯಿತಿಯು ಕೇವಲ 100 ದಿನಗಳವರೆಗೆ ಮಾತ್ರ ಅನ್ವಯಿಸಲಿದೆ. ಆನಂತರ ಶುಲ್ಕವು ಪುನಃ ಶೇ. 5ಕ್ಕೆ ಏರಿಕೆಯಾಗಲಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಇದು ನಮ್ಮ ಸರ್ಕಾರದ 6ನೇ ಗ್ಯಾರಂಟಿ. ಬೆಂಗಳೂರಿನ ಇತಿಹಾಸದಲ್ಲಿ ಇಂತಹ ಬೃಹತ್ ಕಾರ್ಯಕ್ರಮ ಈ ಹಿಂದೆ ಎಂದೂ ನಡೆದಿಲ್ಲ. 23 ಲಕ್ಷ ಆಸ್ತಿಗಳನ್ನು ಅಧಿಕೃತಗೊಳಿಸಿ, ದಾಖಲೆಗಳನ್ನು ಲಂಚಮುಕ್ತವಾಗಿ ಜನರ ಮನೆಗೆ ತಲುಪಿಸುವುದು ನಮ್ಮ ಗುರಿ,” ಎಂದರು.
ಮೇ 16ರಿಂದ ಅಭಿಯಾನ ಅಧಿಕೃತವಾಗಿ ಆರಂಭವಾಗಲಿದೆ. ಜೂನ್ 15ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದೆ. ಮುಂದಿನ ಮೂರು ತಿಂಗಳ ಕಾಲ ಪ್ರತಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ.ಒಂದು ಪಾಲಿಕೆಗೆ 10 ಸ್ಥಳಗಳಂತೆ ಒಟ್ಟು 50 ಕೇಂದ್ರಗಳಲ್ಲಿ ಅಧಿಕಾರಿಗಳು ಲಭ್ಯವಿರುತ್ತಾರೆ. ರಜಾ ದಿನಗಳಾದ 2ನೇ ಮತ್ತು 4ನೇ ಶನಿವಾರವೂ ಸಹ ಅಧಿಕಾರಿಗಳು ಸಾರ್ವಜನಿಕರಿಗಾಗಿ ಕೆಲಸ ಮಾಡಲಿದ್ದಾರೆ.
ಆಡಳಿತಾತ್ಮಕ ಸುಧಾರಣೆಯ ಜೊತೆಗೆ ನಗರದ ಹಸಿರೀಕರಣಕ್ಕೂ ಸರ್ಕಾರ ಒತ್ತು ನೀಡಿದೆ. ಕೆಂಪೇಗೌಡ ಜಯಂತಿಯ ಅಂಗವಾಗಿ ಜೂನ್ 27ರಂದು ನಗರದಾದ್ಯಂತ ಶಾಲೆ ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 15 ಲಕ್ಷ ಸಸಿಗಳನ್ನು ನೆಡಲು ತೀರ್ಮಾನಿಸಲಾಗಿದೆ.
ನಮ್ಮ ಬೆಂಗಳೂರು – ನಮ್ಮ ಗ್ಯಾರಂಟಿ!
ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ನಮ್ಮ ಸರ್ಕಾರದ 6ನೇ ಗ್ಯಾರಂಟಿ – ಭೂ ಗ್ಯಾರಂಟಿ ಹಾಗೂ ಬೆಂಗಳೂರಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದೆ.
ಬೆಂಗಳೂರು ನಗರದ ಇತಿಹಾಸದಲ್ಲಿ ಈವರೆಗೆ ಯಾರೂ ಇಂತಹ… pic.twitter.com/6rxkhViubr
— DK Shivakumar (@DKShivakumar) May 13, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














