Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ 8 ಜಿಲ್ಲೆಗಳಲ್ಲಿ 2 ದಿನ ಆಲಿಕಲ್ಲು ಮಳೆ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ

---Advertisement---

ಸುದ್ದಿಒನ್,ಬೆಂಗಳೂರು,ಮೇ.13: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ವರುಣನ ಅಬ್ಬರ ಜೋರಿರಲಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮೇ 14 ರಿಂದ 16 ರವರೆಗೆ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಲಭ್ಯವಾಗಿದೆ.

ಕರ್ನಾಟಕದ  ಒಟ್ಟು 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಒಂದೆಡೆ ಮಳೆಯ ಆರ್ಭಟವಿದ್ದರೆ, ಇನ್ನೊಂದೆಡೆ ಕರಾವಳಿ ಭಾಗದಲ್ಲಿ ಬಿಸಿಲಿನ ತಾಪ ಹೆಚ್ಚಾಗಲಿದೆ. ಉಷ್ಣ ಅಲೆಯ (Heat Wave) ಹಿನ್ನೆಲೆಯಲ್ಲಿ ಕರಾವಳಿಯ ಎರಡು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಬಿಸಿಲು ಮತ್ತು ಬಿರುಗಾಳಿ ಸಹಿತ ಮಳೆ ಎರಡೂ ಕಂಡುಬರುವ ಸಾಧ್ಯತೆ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now