Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ: ಸರ್ಕಾರದ ನಿರ್ಧಾರಕ್ಕೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಹರ್ಷ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 14 : ಧಾರ್ಮಿಕ ಮತ್ತು ಸಾಂಪ್ರದಾಯಿಕ ವಸ್ತ್ರಗಳನ್ನು ಧರಿಸಲು ರಾಜ್ಯ ಸರ್ಕಾರ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅವಕಾಶ ನೀಡಿರುವುದನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಸ್ವಾಗತಿಸಿದ್ದಾರೆ.

 

2022 ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಗೊಂದಲ ಉಂಟು ಮಾಡಿತ್ತು. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲರೂ ಒಂದೆ ಸಮಾನರು. ಸಾಮರಸ್ಯ ಮೂಡಿಸುವ ಉದ್ದೇಶದಿಂದ ಒಂದರಿಂದ 12 ನೇ ತರಗತಿ ಮಕ್ಕಳಿಗೆ ಹಿಜಾಬ್, ತಲೆವಸ್ತ್ರ, ಪೇಟ ಹಾಗೂ ಟರ್ಬನ್ ಧರಿಸಲು ಅವಕಾಶ ಕಲ್ಪಿಸಿ ಸಂಘರ್ಷಕ್ಕೀಡಾಗಿದ್ದ ವಾತಾವರಣವನ್ನು ತಿಳಿಗೊಳಿಸಿರುವುದಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್,
ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ, ಸೈಯದ್ ಅಫಾಖ್ ಅಹಮದ್ ಇವರುಗಳು ಸ್ವಾಗತಿಸಿ ಅತೀವ ಹರ್ಷ ವ್ಯಕ್ತಪಡಿಸಿದ್ದಾರೆ.

 

ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ 2022 ರಲ್ಲಿ ಶಾಲಾ-ಕಾಲೇಜುಗಳಿಗೆ ಮಕ್ಕಳು ಹಿಜಾಬ್ ಧರಿಸಿ ಬರುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದನ್ನು ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರದ್ದುಪಡಿಸಿ 1 ರಿಂದ 12 ನೇ ತರಗತಿ ಮಕ್ಕಳು ಹಿಜಾಬ್ ಧರಿಸಿ ಶಾಲೆಗೆ ಬರಲು ಅವಕಾಶ ನೀಡಿರುವುದನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್ ಕೆ.ಆರ್. ಸ್ವಾಗತಿಸಿದ್ದಾರೆ.

ಧಾರ್ಮಿಕ ಮತ್ತು ಸಾಂಪ್ರದಾಯಿಕ ಆಚರಣೆ ಅವರವರ ವೈಯಕ್ತಿಕ ವಿಚಾರ. ಸಮಾನತೆ ಎಲ್ಲರೂ ಒಂದೆ ಎನ್ನುವ ಸಾಮರಸ್ಯ ಮೂಡಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಜಾಬ್, ತಲೆವಸ್ತ್ರ, ಪೇಟ, ಟರ್ಬನ್ ಧರಿಸಲು ಅವಕಾಶ ನೀಡಿ ಜಾತಿ ಧರ್ಮಗಳ ನಡುವೆ ಉಂಟಾಗಿದ್ದ ಗೊಂದಲಮಯ ವಾತಾವರಣವನ್ನು ತಿಳಿಸಿಗೊಳಿಸಿರುವುದಕ್ಕೆ ಡಾ.ದಾದಾಪೀರ್ ಕೆ.ಆರ್. ಸಂತಸ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now