ಬೆಂಗಳೂರು: ದರ್ಶನ ವಿರುದ್ಧ ದಾಖಲಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿಗೆ ಮೇ 15 ಮಹತ್ವದ ದಿನವಾಗಿದ್ದು, ನಟನ ಜಾಮೀನು ಭವಿಷ್ಯ ಏನಾಗಲಿದೆ ಎಂಬ ಕುತೂಹಲ ಹೆಚ್ಚಿದೆ.
ಪ್ರಕರಣದ ವಿಚಾರಣೆ ಸೆಷನ್ಸ್ ಕೋರ್ಟ್‌ನಲ್ಲಿ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿರುವ ದರ್ಶನ್, ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. 273 ಸಾಕ್ಷಿದಾರರ ಪೈಕಿ ಇದುವರೆಗೆ ಕೇವಲ 10 ಮಂದಿಯ ವಿಚಾರಣೆಯೂ ಪೂರ್ಣಗೊಂಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಸುಮಾರು ಎಂಟು ತಿಂಗಳಿಂದ ಜೈಲಿನಲ್ಲಿರುವುದಾಗಿ ಹೇಳಿರುವ ದರ್ಶನ್, ಕಾರಾಗೃಹದಲ್ಲಿನ ಪರಿಸ್ಥಿತಿಗಳ ಬಗ್ಗೆ ಸಹ ಅರ್ಜಿಯಲ್ಲಿ ಪ್ರಸ್ತಾಪಿಸಿದ್ದಾರೆ. “ಸಹ ಕೈದಿಗಳಿಂದ ಬೆದರಿಕೆ ಸಾಧ್ಯತೆ ಇದೆ. ಕನಿಷ್ಠ ಸೌಲಭ್ಯಗಳನ್ನೂ ನೀಡಲಾಗುತ್ತಿಲ್ಲ” ಎಂದು ಅವರು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕಾರಾಗೃಹ ಇಲಾಖೆ ಹಾಗೂ ಪ್ರಕರಣದ ತನಿಖೆ ಸಂಬಂಧಿತ ಅಧಿಕಾರಿಗಳಿಂದ ವರದಿ ಸಲ್ಲಿಸಲು ಸೂಚಿಸಿತ್ತು. ಅದರಂತೆ ರಾಜ್ಯ ಸರ್ಕಾರದ ವಿಶೇಷ ಸರ್ಕಾರಿ ಅಭಿಯೋಜಕರ (SPP) ಮೂಲಕ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಕೆಯಾಗಿದೆ.

ವರದಿಯಲ್ಲಿ ದರ್ಶನ್ ಆರೋಪಗಳಿಗೆ ಉತ್ತರ ನೀಡಿರುವ ಅಧಿಕಾರಿಗಳು, “ಜೈಲಿನಲ್ಲಿ ದರ್ಶನ್ ಅವರಿಗೆ ಇತರ ಕೈದಿಗಳೊಂದಿಗೆ ನೇರ ಸಂಪರ್ಕವಿಲ್ಲ. ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಸಿಸಿಟಿವಿ ದೃಶ್ಯಾವಳಿ ಸಹ ಲಭ್ಯವಿದೆ” ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.ನಾಳೆ ನಡೆಯಲಿರುವ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದರ ಮೇಲೆ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಮನ ಇದೀಗ ದೆಹಲಿಯತ್ತ ನೆಟ್ಟಿಚಿತ್ತ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










