ಚಿತ್ರದುರ್ಗ. ಮೇ14: ಭರಮಸಾಗರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 14 ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ 14 ಅಂಗನವಾಡಿ ಕಂ ಕ್ರಷ್ ಸಹಾಯಕಿಯರನ್ನು ಗೌರವಧನದ ಮೇರೆಗೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 08 ಅರ್ಜಿ ಸಲ್ಲಿಸಲು ಕೊನೆಯ ದಿನ.
ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಕಚೇರಿಯಲ್ಲಿ ಇಟ್ಟಿರುವ ಅರ್ಜಿ ಪೆಟ್ಟಿಗೆಯಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತುರುವನೂರು ರಸ್ತೆ, ಬಸಪ್ಪ ಆಸ್ಪತ್ರೆ ಹತ್ತಿರ, ಚಿತ್ರದುರ್ಗ – 577501 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











