ಚಿತ್ರದುರ್ಗ, ಮೇ 14 : ಇದೇ 16ರಂದು ಬೆಳಗ್ಗೆ 10.30 ಗಂಟೆಗೆ ನಗರದ ಎಸ್.ಜೆ.ಎಂ. ದಂತ ಮಹಾವಿದ್ಯಾಲಯ ಸಭಾಂಗಣದಲ್ಲಿ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವತಿಯಿಂದ 2025-26ನೇ ಸಾಲಿನ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಅಂತಿಮವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿದೆ.
ಎಸ್.ಜೆ.ಎಂ. ವಿದ್ಯಾಪೀಠ ಅಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಐ.ಎ.ಎಸ್. (ನಿ), ಅವರು ಗೌರವಾಧ್ಯಕ್ಷತೆ ವಹಿಸಲಿದ್ದು, ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸುವರು. ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ), ಡಾ. ವೆಂಕಟೇಶ್ ಕೆ., ಪ್ರಾಧ್ಯಾಪಕರು, ದಾವಣಗೆರೆ ವಿಶ್ವವಿದ್ಯಾಲಯ, ಡಾ|| ಎಂ.ಹೆಚ್. ರಘುನಾಥರೆಡ್ಡಿ, ಪ್ರಾಂಶುಪಾಲರು, ಎಸ್.ಜೆ.ಎಂ. ದಂತ ಮಹಾವಿದ್ಯಾಲಯ, ರಾಜೇಶ್ ಪಿ.ಎಂ.ಜಿ., ಪ್ರಾಂಶುಪಾಲರು, ಶ್ರೀ ಬೃಹನ್ಮಠ ಸಂಯುಕ್ತ ಪ.ಪೂ. ಕಾಲೇಜು ಇವರುಗಳು ಮುಖ್ಯಅತಿಥಿಗಳಾಗಿ ಭಾಗವಹಿಸುವರು. ಕಾಲೇಜಿನ ಪ್ರಾಚಾರ್ಯ ಡಾ. ಎಲ್. ಈಶ್ವರಪ್ಪ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಬಿ.ಎ. ರ್ಯಾಂಕ್ ವಿಜೇತ ವಿದ್ಯಾರ್ಥಿ ಕು| ಸಲ್ಮಾ ಎಸ್., ಹಾಗೂ ವಾಲಿಬಾಲ್ ಯುನಿವರ್ಸಿಟಿ ಬ್ಲೂ ಕ್ರೀಡಾಪಟು ಕು| ಅಂಜುಂಭಾನು ಅವರನ್ನು ಸನ್ಮಾನಿಸಲಾಗುವುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.









