ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಮೇ. 14 : ತಾಲೂಕಿನ ನಾಯಕನಹಟ್ಟಿ ಸಮೀಪದ ರಾಮಸಾಗರ ಗ್ರಾಮದಲ್ಲಿ ಗುರುವಾರ ಸಂಜೆ ಸುರಿದ ಭಾರೀ ಆಲಿಕಲ್ಲು ಮಳೆ ಜನರಲ್ಲಿ ಅಚ್ಚರಿ ಮೂಡಿಸಿತು.
ಮಳೆಯೊಂದಿಗೆ ಬಿದ್ದ ದೊಡ್ಡ ಗಾತ್ರದ ಆಲಿಕಲ್ಲುಗಳು ಭೂಮಿಯನ್ನು ತಂಪಾಗಿಸಿದರೆ, ಜನರಿಗೆ ಬೇಸಿಗೆಯ ಬಿಸಿಯಿಂದ ತುಸು ನಿರಾಳತೆ ನೀಡಿದವು.
ಆದರೆ ಇದೇ ವೇಳೆ ರಾಮಸಾಗರ ಗ್ರಾಮದ ಕೃಷ್ಣ ಎಂಬುವರ ದಾಳಿಂಬೆ ತೋಟದಲ್ಲಿ ಬಿದ್ದ ಭಾರೀ ಗಾತ್ರದ ಆಲಿಕಲ್ಲುಗಳ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೋಟದೊಳಗೆ ಬಿದ್ದಿದ್ದ ದೊಡ್ಡ ಗಾತ್ರದ ಆಲಿಕಲ್ಲುಗಳನ್ನು ಗ್ರಾಮಸ್ಥರು ಮೊಬೈಲ್ನಲ್ಲಿ ಚಿತ್ರೀಕರಿಸಿ ಹಂಚಿಕೊಂಡಿದ್ದು, ವೀಡಿಯೋಗೆ ಸಾರ್ವಜನಿಕರಿಂದ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅಕಸ್ಮಿಕವಾಗಿ ಸುರಿದ ಆಲಿಕಲ್ಲು ಮಳೆಯಿಂದ ಕೆಲ ಕೃಷಿ ಬೆಳೆಗಳಿಗೆ ಹಾನಿಯಾಗಿರುವ ಸಾಧ್ಯತೆ ಇದ್ದು, ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಇಂತಹ ಆಲಿಕಲ್ಲು ಮಳೆ ಅಪರೂಪವಾಗಿ ಕಾಣಸಿಗುತ್ತದೆ ಎಂದು ತಿಳಿಸಿದ್ದಾರೆ.









