ಸುದ್ದಿಒನ್,ಕೊಪ್ಪಳ,ಮೇ.15: ಜಿಲ್ಲೆಯ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಶುಕ್ರವಾರದಂದು ಅತ್ಯಂತ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ತುಂಗಭದ್ರಾ ನದಿಯ ಸೇತುವೆಯ ಮೇಲಿಂದ ಕೆಳಕ್ಕೆ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ್ದೇ ಈ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಮೃತದೇಹಗಳು ಬಿದ್ದಿದ್ದ ದೃಶ್ಯ ಅತ್ಯಂತ ಕರುಣಾಜನಕವಾಗಿತ್ತು. ದುರಂತದ ಸಮಯದಲ್ಲಿ ಟ್ರ್ಯಾಕ್ಟರ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ಪ್ರಯಾಣಿಕರು ಇದ್ದರೆಂದು ತಿಳಿದುಬಂದಿದೆ.ಅನೇಕರು ವಾಹನದ ಅಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಇದರಿಂದಾಗಿ ಸಾವಿನ ಸಂಖ್ಯೆ ಇನ್ನು ಏರಿಕೆಯಾಗುವ ಭೀತಿ ಎದುರಾಗಿದೆ. ವಿಷಯ ತಿಳಿಯುತ್ತಿದ್ದಂತೆ ಮುನಿರಾಬಾದ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











