Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ನೌಕರರಿಗೆ ಸಂಘಟನೆಯ ಅಗತ್ಯವಿದೆ : ರಾಜಪ್ಪ

---Advertisement---

ಚಿತ್ರದುರ್ಗ: ಸರ್ಕಾರಿ ನೌಕರರು ತಮ್ಮ ಹಕ್ಕುಗಳ ರಕ್ಷಣೆ ಹಾಗೂ ವೃತ್ತಿ ಬದುಕಿನ ಏಳಿಗೆಗಾಗಿ ಸಂಘಟಿತರಾಗುವುದು ಇಂದಿನ ಅಗತ್ಯವಾಗಿದೆ ಎಂದು ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್. ರಾಜಪ್ಪ ತಿಳಿಸಿದರು.

ನಗರದ ರಾಜ್ಯ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಪದೋನ್ನತಿ ಹೊಂದಿದ ಶಿಕ್ಷಕರಿಗೆ ಹಾಗೂ ಸಂಘದ ನಿರ್ದೇಶಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2026ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ಹೊಂದಿದ ಪರಿಶಿಷ್ಟ ವರ್ಗದ 16 ಶಿಕ್ಷಕರನ್ನು ಹಾಗೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಯ್ಕೆಯಾದ 13 ನಿರ್ದೇಶಕರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ಎಸ್. ರಂಗಸ್ವಾಮಿ ಅವರು ಸಮಾರಂಭ ಉದ್ಘಾಟಿಸಿ, ಸಂಘಟನೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಸಂಘಟನೆ ಮತ್ತಷ್ಟು ಬಲಪಡಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ಶ್ರೀನಿವಾಸ ನಾಯಕ, ಆರ್. ಮಾರುತೇಶ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ. ಮಹಾಂತೇಶ್, ಬಿಇಒ ನಾಗಭೂಷಣ್, ಎಲ್‍ಐಸಿ ಮಹೇಶ್ ಸೇರಿದಂತೆ ರಾಜಯ್ಯ, ವಸಂತ ಕುಮಾರ್, ಕೆ. ಸುದರ್ಶನ, ವಿಮಲಾಕ್ಷಿ,  ಸಣ್ಣಸೂರಪ್ಪ, ಕರಿಯಣ್ಣ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...