ಹುಬ್ಬಳ್ಳಿ : ಬೇಸಿಗೆ ಅವಧಿಯಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆ ಮಹತ್ವದ ಕ್ರಮ ಕೈಗೊಂಡಿದ್ದು, ಯಶವಂತಪುರ ಮತ್ತು ವಿಜಯಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಲು ತೀರ್ಮಾನಿಸಿದೆ.ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ, ಹುಬ್ಬಳ್ಳಿ ಬೈಪಾಸ್ ಮಾರ್ಗವಾಗಿ ಈ ವಿಶೇಷ ರೈಲು ಸಂಚರಿಸಲಿದ್ದು, ಮೇ 16ರಿಂದ ಜೂನ್ 28ರವರೆಗೆ ವಾರಾಂತ್ಯಗಳಲ್ಲಿ ಸೇವೆ ನೀಡಲಿದೆ.
ರೈಲು ಸಂಖ್ಯೆ 06577 ಯಶವಂತಪುರ–ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಮೇ 16, 2026ರಿಂದ ಜೂನ್ 27, 2026ರವರೆಗೆ ಪ್ರತಿ ಶನಿವಾರ ಸಂಜೆ 6.15ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 5.15ಕ್ಕೆ ವಿಜಯಪುರ ತಲುಪಲಿದೆ. ಹಿಂದಿರುಗುವ ಮಾರ್ಗದಲ್ಲಿ ರೈಲು ಸಂಖ್ಯೆ 06578 ವಿಜಯಪುರ–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ಮೇ 17, 2026ರಿಂದ ಜೂನ್ 28, 2026ರವರೆಗೆ ಪ್ರತಿ ಭಾನುವಾರ ಸಂಜೆ 5 ಗಂಟೆಗೆ ವಿಜಯಪುರದಿಂದ ಹೊರಟು, ಮರುದಿನ ಬೆಳಿಗ್ಗೆ 4 ಗಂಟೆಗೆ ಯಶವಂತಪುರ ತಲುಪಲಿದೆ.

ಈ ವಿಶೇಷ ರೈಲು ತುಮಕೂರು, ಅರಸೀಕೆರೆ, ದಾವಣಗೆರೆ, ಎಸ್‌ಎಂಎಂ ಹಾವೇರಿ, ಗದಗ ಬೈಪಾಸ್, ಬದಾಮಿ, ಬಾಗಲಕೋಟೆ, ಆಲಮಟ್ಟಿ ಹಾಗೂ ಬಸವನ ಬಾಗೇವಾಡಿ ರೋಡ್ ಸೇರಿದಂತೆ ಹಲವು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.ಪ್ರಯಾಣಿಕರ ಅನುಕೂಲಕ್ಕಾಗಿ ಈ ವಿಶೇಷ ರೈಲಿನಲ್ಲಿ ಒಟ್ಟು 19 ಐಸಿಎಫ್ ಬೋಗಿಗಳನ್ನು ಜೋಡಿಸಲಾಗಿದೆ. ಇದರಲ್ಲಿ 2 ಎಸಿ 2-ಟೈರ್, 4 ಎಸಿ 3-ಟೈರ್, 7 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಹಾಗೂ ದಿವ್ಯಾಂಗರಿಗೆ ಅನುಕೂಲವಾಗುವ ವಿಶೇಷ ಲಗೇಜ್ ಕಮ್ ಬ್ರೇಕ್ ವ್ಯಾನ್‌ಗಳೂ ಸೇರಿವೆ.
ಮೇಲಿನ ಅವಧಿಯಲ್ಲಿ ಈ ವಿಶೇಷ ರೈಲು ಪ್ರತಿ ದಿಕ್ಕಿನಲ್ಲಿ ಏಳು ಟ್ರಿಪ್‌ಗಳನ್ನು ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.


















