ಸುದ್ದಿಒನ್,ಮುಂಬೈ,ಮೇ.16 : ಬಂಗಾರ ಮತ್ತು ಬೆಳ್ಳಿ ಪ್ರಿಯರಿಗೆ ಒಂದು ಸೂಪರ್ ಗುಡ್ ನ್ಯೂಸ್ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಗಗನಕ್ಕೇರುತ್ತಿದ್ದ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಇಂದು ಭಾರಿ ಇಳಿಕೆ ಕಂಡುಬಂದಿದ್ದು, ಕೊನೆಗೂ ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕೆಲವು ಪ್ರಮುಖ ಬೆಳವಣಿಗೆಗಳಿಂದಾಗಿ ಚಿನ್ನ ಮತ್ತು ಬೆಳ್ಳಿಯ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ.
ಇತ್ತೀಚೆಗೆ ಕೇಂದ್ರ ಸರ್ಕಾರವು ವಿದೇಶದಿಂದ ಆಮದು ಮಾಡಿಕೊಳ್ಳುವ ಚಿನ್ನ ಮತ್ತು ಬೆಳ್ಳಿಯ ಮೇಲಿನ ಸುಂಕವನ್ನು ಹೆಚ್ಚಿಸಿದ ಕಾರಣ ಬೆಲೆಗಳು ದಿಢೀರನೆ ಆಕಾಶ ಮುಟ್ಟಿದ್ದವು. ಆದರೆ, ಇದೀಗ ಮಾರುಕಟ್ಟೆಯಲ್ಲಿ ಮತ್ತೆ ಇಳಿಕೆಯ ಹಾದಿ ಹಿಡಿದಿವೆ.

ಶನಿವಾರ ಬೆಳಿಗ್ಗೆ 6 ಗಂಟೆಯ ವೇಳೆಗೆ ದೇಶೀಯ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹1,57,900 ಆಗಿದ್ದರೆ, 22 ಕ್ಯಾರೆಟ್ ಚಿನ್ನದ ಬೆಲೆ ₹1,44,740 ಕ್ಕೆ ತಲುಪಿದೆ. ಶುಕ್ರವಾರದ ದರಕ್ಕೆ ಹೋಲಿಸಿದರೆ 24 ಕ್ಯಾರೆಟ್ ಚಿನ್ನದ ಮೇಲೆ ₹4,420 ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ ₹4,050 ರಷ್ಟು ಭಾರಿ ಇಳಿಕೆಯಾಗಿದೆ.
ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರಗಳು (10 ಗ್ರಾಂಗೆ):















