Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೋಟರಿ ಮತ್ತು ವಾಸವಿ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಯಶಸ್ವಿ ರಕ್ತದಾನ ಶಿಬಿರ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ.16 : ಸ್ಥಳೀಯ ರೋಟರಿ ಕ್ಲಬ್, ವಾಸವಿ ಕ್ಲಬ್, ರೋಟ್ರಾಕ್ಟ್ ಕ್ಲಬ್ ಹಾಗೂ ವಾಸವಿ ಬ್ಲಡ್ ಸೆಂಟರ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದ್ದ “ಬೃಹತ್ ರಕ್ತದಾನ ಶಿಬಿರ”ವು ಅತ್ಯಂತ ಯಶಸ್ವಿಯಾಗಿ ಜರುಗಿತು.

ಎಸ್‌ಆರ್‌ಬಿಎಂಎಸ್ ರೋಟರಿ ಭವನದಲ್ಲಿ (ಡಿಸಿ ವೃತ್ತ) ಆಯೋಜಿಸಲಾಗಿದ್ದ ಈ ಅರ್ಥಪೂರ್ಣ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಅತ್ಯಂತ ವಿಭಿನ್ನವಾಗಿ ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷರಾದ ಭಾಗ್ಯಮೂರ್ತಿ, ವಾಸವಿ ಕ್ಲಬ್‌ನ ಅಧ್ಯಕ್ಷರಾದ ರಶ್ಮಿ ಹರೀಶ್, ರೋಟ್ರಾಕ್ಟ್ ಅಧ್ಯಕ್ಷರಾದ ಚಿನ್ಮಯ್ ಹಾಗೂ ವಾಸವಿ ಕ್ಲಬ್ಬಿನ ಹಾಲಿ ಜಾಯಿಂಟ್ ಕ್ಯಾಬಿನೆಟ್ ಸೆಕ್ರೆಟರಿ ಇಂಟರ್ನ್ಯಾಷನಲ್ ಎ. ಆರ್. ಲಕ್ಷ್ಮಣ್ ಅವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಎಲ್ಲಾ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಸಕ್ರಿಯವಾಗಿ ಭಾಗವಹಿಸಿ ಶಿಬಿರದ ಯಶಸ್ಸಿಗೆ ಶ್ರಮಿಸಿದರು.

ವಾಸವಿ ಬ್ಲಡ್ ಸೆಂಟರ್ ಮುಖ್ಯಸ್ಥರಾದ ಡಾಕ್ಟರ್ ಶ್ರೀನಿವಾಸ್ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ರಕ್ತದಾನದ ಅಗತ್ಯತೆ ಹಾಗೂ ಅದರಿಂದಾಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ಸಾರ್ವಜನಿಕರಿಗೆ ವಿವರವಾದ ಮಾಹಿತಿ ನೀಡಿದರು.

ರಕ್ತದಾನಿಗಳ ಮಾನವೀಯತೆ:

ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಈ ಶಿಬಿರದಲ್ಲಿ 12ಕ್ಕೂ ಹೆಚ್ಚು ಜನ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ತುರ್ತು ಪರಿಸ್ಥಿತಿಯಲ್ಲಿರುವ ಹಾಗೂ ಅವಶ್ಯಕತೆ ಇರುವ ರೋಗಿಗಳ ಬಾಳಿಗೆ ಬೆಳಕಾಗುವ ನಿಟ್ಟಿನಲ್ಲಿ ರಕ್ತದಾನ ಮಾಡಿದ ಮಹಾನುಭಾವರ ಮಾನವೀಯ ಕಾರ್ಯವನ್ನು ಸಂಘಟಕರು ಮುಕ್ತಕಂಠದಿಂದ ಶ್ಲಾಘಿಸಿ, ಧನ್ಯವಾದ ಸಮರ್ಪಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now