Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಶ್ವಗಂಧ ಬಳಕೆ ನಿಷೇಧಕ್ಕೆ ಹೈಕೋರ್ಟ್ ಬ್ರೇಕ್ : ಏಕೆ ?

---Advertisement---

ಬೆಂಗಳೂರು : ಅಶ್ವಗಂಧ ಸಸ್ಯದ ಎಲೆಗಳು ಹಾಗೂ ಬೇರುಗಳ ಸಾರವನ್ನು ಆಹಾರ ಉತ್ಪನ್ನಗಳಲ್ಲಿ ಬಳಸುವುದನ್ನು ನಿಷೇಧಿಸಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ನೀಡಿದ್ದ ಸಲಹೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

Sami-Sabinsa Group Limited ಹಾಗೂ Kerry Inc ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರ ಮತ್ತು Food Safety and Standards Authority of India ಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿರುವ ನ್ಯಾಯಾಲಯ, ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 8ಕ್ಕೆ ಮುಂದೂಡಿದೆ.
ಇದೇ ವೇಳೆ, 2026ರ ಏಪ್ರಿಲ್ 16ರಂದು ಹೊರಡಿಸಿದ್ದ ವಿವಾದಿತ ಸಲಹಾ ಪ್ರಕಟಣೆ ಮುಂದಿನ ವಿಚಾರಣೆಯವರೆಗೆ ಅರ್ಜಿದಾರ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಅಶ್ವಗಂಧ ಎಲೆಗಳಲ್ಲಿ ‘ವಿಥಾಫೆರಿನ್-ಎ’ ಅಂಶ ಹೆಚ್ಚಿದ್ದು, ಅದು ಯಕೃತ್‌, ಜೀರ್ಣಾಂಗ ಹಾಗೂ ನರಮಂಡಲದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿದ್ದವು. ಇದರ ಆಧಾರದ ಮೇಲೆ ಆಯುಷ್ ಸಚಿವಾಲಯ ಅಶ್ವಗಂಧ ಬಳಕೆಗೆ ಎಚ್ಚರಿಕೆ ನೀಡಿತ್ತು. ಬಳಿಕ ಎಫ್‌ಎಸ್‌ಎಸ್‌ಎಐ ಸಲಹಾ ಪ್ರಕಟಣೆ ಹೊರಡಿಸಿತ್ತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, “ಕಂಪನಿಗಳು ಕಳೆದ 30 ವರ್ಷಗಳಿಂದ ಅಶ್ವಗಂಧ ಆಧಾರಿತ ಉತ್ಪನ್ನಗಳನ್ನು ತಯಾರಿಸುತ್ತಿವೆ. ಇದುವರೆಗೆ ಯಾವುದೇ ಗಂಭೀರ ಸುರಕ್ಷತಾ ಸಮಸ್ಯೆ ದಾಖಲಾಗಿಲ್ಲ” ಎಂದು ವಾದಿಸಿದರು.ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಾವಳಿಗಳ ಪ್ರಕಾರವೇ ಅಶ್ವಗಂಧದ ಬೇರು, ಎಲೆ ಮತ್ತು ಸಾರಗಳನ್ನು ಬಳಸಿ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ ಎಂದು ಅವರು ನ್ಯಾಯಾಲಯಕ್ಕೆ ವಿವರಿಸಿದರು.

2016ರ ಆಹಾರ ಸುರಕ್ಷತಾ ನಿಯಮಗಳಿಗೆ ಅಧಿಕೃತ ತಿದ್ದುಪಡಿ ಮಾಡದೆ, ಕೇವಲ ಸಲಹಾ ಪತ್ರದ ಮೂಲಕ ಯಾವುದೇ ಪದಾರ್ಥವನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಅರ್ಜಿದಾರರು ವಾದಿಸಿದರು.ಈ ಕ್ರಮದಿಂದ ಉತ್ಪಾದನೆ ಮತ್ತು ರಫ್ತಿಗೆ ಭಾರೀ ಹೊಡೆತ ಬೀಳಲಿದ್ದು, ವ್ಯಾಪಾರಕ್ಕೆ ದೊಡ್ಡ ಮಟ್ಟದ ನಷ್ಟ ಉಂಟಾಗಲಿದೆ ಎಂದು ನ್ಯಾಯಾಲಯದ ಗಮನ ಸೆಳೆದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now