Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ : 8,176 ಹುದ್ದೆಗಳ ಭರ್ತಿಗೆ ಸಿದ್ಧತೆ!

---Advertisement---

ಸುದ್ದಿಒನ್,ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಜನತೆಗೆ ಕರ್ನಾಟಕ ಸರ್ಕಾರ ಮತ್ತು ಪೊಲೀಸ್ ಇಲಾಖೆಯು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಒಟ್ಟು 8,176 ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆ ಬಿರುಸಿನ ಸಿದ್ಧತೆ ನಡೆಸಿದೆ. ಈ ಕುರಿತು ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (DG & IGP) ಕಚೇರಿಯಿಂದ ಅಧಿಕೃತ ಜ್ಞಾಪನ ಪತ್ರ ಹೊರಬಿದ್ದಿದೆ.

ಪೊಲೀಸ್ ಇಲಾಖೆಯ ನೇರ ನೇಮಕಾತಿಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕೇತರ ವಲಯಗಳ ವರ್ಗೀಕರಣದ ವಿವರಗಳನ್ನು ಈಗಾಗಲೇ ಇಲಾಖೆಯ ನೇಮಕಾತಿ ವಿಭಾಗಕ್ಕೆ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆಯಿದೆ.

ಯಾವ್ಯಾವ ಹುದ್ದೆಗಳು ಎಷ್ಟು ಖಾಲಿ ಇವೆ?

ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಪ್ರಮುಖವಾಗಿ ಈ ಕೆಳಗಿನ ಹುದ್ದೆಗಳ ಭರ್ತಿ ನಡೆಯಲಿದೆ:

ಕ್ರ.ಸಂ ಹುದ್ದೆಯ ಹೆಸರು ಕಲ್ಯಾಣ ಕರ್ನಾಟಕ ಕಲ್ಯಾಣ ಕರ್ನಾಟಕೇತರ ಒಟ್ಟು ಹುದ್ದೆಗಳು
1 ಡಿಟೆಕ್ಟಿವ್ ಸಬ್ ಇನ್ಸ್‌ಪೆಕ್ಟರ್ (DSI) 05 15 20
2 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (APC) 275 1375 1,650
3 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ (Civil) 610 3500 4,110
4 ಸ್ಟೇಟ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (KSRP) 532 1500 2,032
5 ಪೊಲೀಸ್ ಕಾನ್ಸ್ಟೇಬಲ್ (KSISF) 364 364
ಒಟ್ಟು ಹುದ್ದೆಗಳು 1,786 6,390

ಒಳ ಮೀಸಲಾತಿ ನಿಯಮ ಅನ್ವಯ:
ಸರ್ಕಾರದ ಇತ್ತೀಚಿನ ಆದೇಶದನ್ವಯ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿಯ (SC) ಒಟ್ಟು ಶೇಕಡಾ 15 ರಷ್ಟು ಮೀಸಲಾತಿಯಲ್ಲಿ ಆಂತರಿಕ ಒಳ ಮೀಸಲಾತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ಇದರ ಪ್ರಕಾರ:

ಪ್ರವರ್ಗ-ಎ: ಶೇಕಡಾ 5.25

ಪ್ರವರ್ಗ-ಬಿ: ಶೇಕಡಾ 5.25

ಪ್ರವರ್ಗ-ಸಿ: ಶೇಕಡಾ 4.5

ರಂತೆ ಒಳ ಮೀಸಲಾತಿಯನ್ನು ನಿಗದಿಪಡಿಸಲಾಗಿದ್ದು, ಅದರ ಆಧಾರದ ಮೇಲೆಯೇ 400 ಬಿಂದುಗಳ ನೇರ ನೇಮಕಾತಿ ರೋಸ್ಟರ್ (Vertical Roster) ಸಿದ್ಧಪಡಿಸಿ ಮುಂದಿನ ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ.

ಪೊಲೀಸ್ ಇಲಾಖೆಗೆ ಸೇರಿ ದೇಶಸೇವೆ ಮಾಡಬಯಸುವ ರಾಜ್ಯದ ಯುವಕ-ಯುವತಿಯರಿಗೆ ಇದು ಸುವರ್ಣಾವಕಾಶವಾಗಿದ್ದು, ಅಧಿಕೃತ ಅಧಿಸೂಚನೆ ಹೊರಬಿದ್ದ ತಕ್ಷಣವೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now