Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್ : ನೋ ವರ್ಕ್, ನೋ ಪೇ ಆದೇಶ ಜಾರಿ

---Advertisement---

ಸುದ್ದಿಒನ್,ಬೆಂಗಳೂರು,ಮೇ.18: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸಲು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತನ್ನ ಸಿಬ್ಬಂದಿಗೆ ಬಿಗ್ ಶಾಕ್ ನೀಡಿದೆ. ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕಠಿಣ ನಿಲುವು ತಳೆದಿರುವ ಸಂಸ್ಥೆ, ‘ಕೆಲಸವಿಲ್ಲದಿದ್ದರೆ ವೇತನವಿಲ್ಲ’ (No Work, No Pay) ನಿಯಮವನ್ನು ಜಾರಿಗೆ ತಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ತಡೆಯಲು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಈ ಮಹತ್ವದ ಆದೇಶವನ್ನು ಜಾರಿಗೊಳಿಸಿದ್ದಾರೆ. ವೇತನ ಕಡಿತ (No Work, No Pay): ಮುಷ್ಕರದ ದಿನದಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರಿಗೆ ಅಂದಿನ ದಿನದ ಯಾವುದೇ ವೇತನವನ್ನು ನೀಡಲಾಗುವುದಿಲ್ಲ.

ಕಠಿಣ ಶಿಸ್ತು ಕ್ರಮ: ಸಾರ್ವಜನಿಕ ಸಾರಿಗೆ ಸೇವೆಗೆ ಅಡ್ಡಿಪಡಿಸುವುದು ಅಥವಾ ನಿಯಮ ಉಲ್ಲಂಘಿಸಿ ಮುಷ್ಕರದಲ್ಲಿ ಭಾಗಿಯಾಗುವುದು ಕಂಡುಬಂದಲ್ಲಿ, ಅಂತಹ ನೌಕರರ ವಿರುದ್ಧ ಇಲಾಖಾ ಮಟ್ಟದ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು.ಮುಷ್ಕರದ ಅವಧಿಯಲ್ಲಿ ಸಿಬ್ಬಂದಿಗೆ ಯಾವುದೇ ರೀತಿಯ ಮುಂಗಡ ರಜೆಗಳನ್ನು ಮಂಜೂರು ಮಾಡದಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಷ್ಟೇ ಅಲ್ಲದೆ, ಈಗಾಗಲೇ ರಜೆ ಪಡೆದಿರುವ ನೌಕರರ ರಜೆಯನ್ನು ಸಹ (ಅತ್ಯಗತ್ಯ ವೈದ್ಯಕೀಯ ಸಂದರ್ಭಗಳನ್ನು ಹೊರತುಪಡಿಸಿ) ತಕ್ಷಣದಿಂದಲೇ ರದ್ದುಗೊಳಿಸಲು ಆದೇಶಿಸಲಾಗಿದೆ.

ಸುಗಮ ಬಸ್ ಸಂಚಾರಕ್ಕೆ ಸೂಚನೆ: ನಾಲ್ಕೂ ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಬಸ್‌ಗಳ ಸಂಚಾರಕ್ಕೆ ಯಾವುದೇ ರೀತಿಯ ಅಡ್ಡಿಯಾಗದಂತೆ ಸೂಕ್ತ ಮುನ್ನೆಚ್ಚರಿಕೆ ಹಾಗೂ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ವಿಭಾಗೀಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಸಾರ್ವಜನಿಕರ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ನೌಕರರು ಮುಷ್ಕರದ ನಿರ್ಧಾರವನ್ನು ಕೈಬಿಡಬೇಕು. ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಬೇಕು,” ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ನೌಕರರಿಗೆ ಕಟು ಎಚ್ಚರಿಕೆ ನೀಡಿದ್ದಾರೆ. ಸಂಸ್ಥೆಯ ಈ ದಿಢೀರ್ ಆದೇಶದಿಂದಾಗಿ ಸಾರಿಗೆ ನೌಕರರ ವಲಯದಲ್ಲಿ ಭಾರೀ ಸಂಚಲನ ಮೂಡಿದ್ದು, ಮುಷ್ಕರದ ಮುಂದಿನ ನಡೆ ಕುರಿತು ತೀವ್ರ ಕುತೂಹಲ ಮೂಡಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now