Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್ ಘೋಷಣೆ

---Advertisement---

ಸುದ್ದಿಒನ್,ಬೆಂಗಳೂರು,ಮೇ.19: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯಾದ್ಯಂತ ಬೇಸಿಗೆ ಮಳೆ ಅಬ್ಬರಿಸುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರಮುಖವಾಗಿ ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ತೀವ್ರವಾಗಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಮಲೆನಾಡು, ಬೆಂಗಳೂರು ಮತ್ತು ಮೈಸೂರು ಭಾಗದಲ್ಲಿ ಮುಂದಿನ 4 ದಿನಗಳ ಕಾಲ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 2 ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರದಲ್ಲಿ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮೇ 19ರಿಂದ ಮೇ 21ರವರೆಗೆ ಗುಡುಗು ಹಾಗೂ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now