Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಕಿಂಗ್ ನ್ಯೂಸ್: ಪತಿಯ ಕಾಟ ತಡೆಯಲಾರದೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆಯನ್ನು ಗರ್ಭಿಣಿ ಮಾಡಿ ಕೈಕೊಟ್ಟ ಪೊಲೀಸಪ್ಪ

---Advertisement---

ಸುದ್ದಿಒನ್, ಮೇ. 19 :
ಖಮ್ಮಂ: ಪತಿಯ ಕಿರುಕುಳ ತಾಳಲಾರದೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ವಿವಾಹಿತ ಮಹಿಳೆಯ ಮೇಲೆಯೇ ವಕ್ರದೃಷ್ಟಿ ಬೀರಿದ ಪೊಲೀಸ್ ಅಧಿಕಾರಿಯೊಬ್ಬರು, ಮದುವೆಯ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿ ಮಾಡಿರುವ ಘೋರ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಸಿಐ ಭುಕ್ಯಾ ರಾಜು ನಾಯಕ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಉನ್ನತ ಅಧಿಕಾರಿಗಳು ಸದ್ಯ ಅವರನ್ನು ಹೈದರಾಬಾದ್ನ ಡಿಜಿಪಿ ಕಚೇರಿಗೆ ವರ್ಗಾವಣೆ ಮಾಡಿದ್ದಾರೆ. ಈ ಘಟನೆ ಇಡೀ ತೆಲಂಗಾಣ ರಾಜ್ಯಾದ್ಯಂತ ತೀವ್ರ ಕೋಲಾಹಲ ಸೃಷ್ಟಿಸಿದೆ.

ಪ್ರಕರಣದ ವಿವರ:
ಸದ್ಯ ಖಮ್ಮಂ ಸಿಸಿಎಸ್ (CCS) ಠಾಣೆಯಲ್ಲಿ ಸಿಐ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಜು ನಾಯಕ್ ವಿರುದ್ಧ ಖಮ್ಮಂ ಟೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2023 ರಲ್ಲಿ ರಾಜು ನಾಯಕ್ ಖಮ್ಮಂ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಿಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ಸಂತ್ರಸ್ತ ಮಹಿಳೆಯು ತನ್ನ ಪತಿ ತನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ನೀಡಲು ಠಾಣೆಗೆ ಬಂದಿದ್ದರು. ದೂರಿನ ಪ್ರತಿಯಲ್ಲಿದ್ದ ಮಹಿಳೆಯ ಫೋನ್ ಸಂಖ್ಯೆಯನ್ನು ಪಡೆದುಕೊಂಡ ಸಿಐ, ಆಕೆಗೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿ ನಿರಂತರವಾಗಿ ಕರೆ ಮತ್ತು ಸಂದೇಶಗಳನ್ನು ಕಳುಹಿಸಲು ಪ್ರಾರಂಭಿಸಿದ್ದಾನೆ.

ಮಹಿಳೆಯ ಪರಿಸ್ಥಿತಿಯ ದುರ್ಲಾಭ ಪಡೆದ ಸಿಐ, ಆಕೆಯನ್ನು ಪ್ರೀತಿಸುವುದಾಗಿ ಮತ್ತು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಮಧ್ಯೆ ಮಹಿಳೆ ಗರ್ಭಿಣಿಯಾಗಿದ್ದಾಳೆ. ತಾನು ಗರ್ಭಿಣಿಯಾದ ವಿಷಯ ತಿಳಿದು ತನ್ನನ್ನು ಮದುವೆಯಾಗುವಂತೆ ಮಹಿಳೆ ಒತ್ತಾಯಿಸಿದಾಗ, ಸಿಐ ರಾಜು ನಾಯಕ್ ಆಕೆಗೆ ಬಲವಂತವಾಗಿ ಮಾತ್ರೆಗಳನ್ನು ನುಂಗಿಸಿ ಗರ್ಭಪಾತ ಮಾಡಿಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಸಂತ್ರಸ್ತ ಮಹಿಳೆಗೆ ಇತ್ತೀಚೆಗಷ್ಟೇ ನ್ಯಾಯಾಲಯದಿಂದ ಪತಿಯಿಂದ ವಿಚ್ಛೇದನ ಸಿಕ್ಕಿದೆ. ಆದರೆ, ಸಿಐ ರಾಜು ನಾಯಕ್ ಅವರೇ ಆಕೆಯ ಪತಿಯ ಮೇಲೆ ಒತ್ತಡ ಹೇರಿ ಈ ವಿಚ್ಛೇದನ ಕೊಡಿಸಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ವಿಚ್ಛೇದನದ ನಂತರವೂ ಸಿಐ ಮದುವೆಯಾಗಲು ನಿರಾಕರಿಸಿ ಸತಾಯಿಸಿದಾಗ ಮಹಿಳೆಗೆ ವಂಚನೆಯಾಗಿರುವುದು ಮನವರಿಕೆಯಾಗಿದೆ. ತನಗೆ ನಡೆದ ಅನ್ಯಾಯದ ವಿರುದ್ಧ ಸಂತ್ರಸ್ತೆ ಇದೇ ತಿಂಗಳ 7 ರಂದು ಖಮ್ಮಂ ಟೂ ಟೌನ್ ಪೊಲೀಸರಿಗೆ ಅಧಿಕೃತವಾಗಿ ದೂರು ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸಿಐ ರಾಜು ನಾಯಕ್ ಅವರ ಕಿರುಕುಳ ಮತ್ತು ಅಕ್ರಮ ಸಂಬಂಧ ಸಾಬೀತಾದ ಹಿನ್ನೆಲೆಯಲ್ಲಿ, ಉನ್ನತ ಪೊಲೀಸ್ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...