Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ವಿಮ್ಮಿಂಗ್ ಪೂಲ್ ದುರಂತಕ್ಕೆ ಗ್ರಾಹಕರ ಆಯೋಗದ ಗರಂ ತೀರ್ಪು: ಮೃತ ಬಾಲಕರ ಕುಟುಂಬಕ್ಕೆ ಲಕ್ಷಾಂತರ ಪರಿಹಾರ

---Advertisement---

ದಾವಣಗೆರೆ, ಮೇ.19 : ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದ್ದು, 4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now