ಕರ್ನಾಟಕ ಸರ್ಕಾರವು ಜನಸಾಮಾನ್ಯರು ಮತ್ತು ಬಡ ಕುಟುಂಬಗಳಿಗೆ ಮತ್ತೊಂದು ಮಹತ್ವದ ಆರೋಗ್ಯ ಸೌಲಭ್ಯವನ್ನು ಘೋಷಿಸಿದೆ. ಇನ್ನು ಮುಂದೆ ರೇಷನ್ ಕಾರ್ಡ್ ಹೊಂದಿರುವವರು ಕೇವಲ ಆಹಾರ ಧಾನ್ಯಗಳಷ್ಟೇ ಅಲ್ಲ, ದಂತ ಚಿಕಿತ್ಸೆಯಲ್ಲೂ ಉಚಿತ ಹಾಗೂ ಭಾರೀ ರಿಯಾಯಿತಿ ಸೌಲಭ್ಯ ಪಡೆಯಬಹುದಾಗಿದೆ. ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ಹಲ್ಲಿನ ಚಿಕಿತ್ಸೆಯನ್ನು ಇದೀಗ ಆಯುಷ್ಮಾನ್ ಭಾರತ್ ಹಾಗೂ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ಸೇರಿಸಲಾಗಿದೆ.
ರೂಟ್ ಕೆನಾಲ್ ಸೇರಿ ದಂತ ಚಿಕಿತ್ಸೆಗೆ ಸರ್ಕಾರದ ನೆರವು
ಸಾಮಾನ್ಯವಾಗಿ ಹಲ್ಲು ನೋವು, ದಂತ ಸಮಸ್ಯೆಗಳು ಅಥವಾ ರೂಟ್ ಕೆನಾಲ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಇದು ದೊಡ್ಡ ಹೊರೆ ಆಗುತ್ತಿತ್ತು. ಜನರ ಈ ಸಂಕಷ್ಟವನ್ನು ಗಮನಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಂತ ಚಿಕಿತ್ಸೆಯನ್ನು ಸರ್ಕಾರಿ ಆರೋಗ್ಯ ಯೋಜನೆಯ ವ್ಯಾಪ್ತಿಗೆ ತರಲು ಕ್ರಮ ಕೈಗೊಂಡಿದ್ದಾರೆ.
ಬಿಪಿಎಲ್ ಕಾರ್ಡ್ ಇದ್ದವರಿಗೆ ಸಂಪೂರ್ಣ ಉಚಿತ
ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಹಲ್ಲಿನ ಚಿಕಿತ್ಸೆ ಹಾಗೂ ರೂಟ್ ಕೆನಾಲ್ ಸಂಪೂರ್ಣ ಉಚಿತವಾಗಿರುತ್ತದೆ. ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಎಪಿಎಲ್ ಕಾರ್ಡ್‌ದಾರರಿಗೆ 70% ರಿಯಾಯಿತಿ
ಎಪಿಎಲ್ ಕಾರ್ಡ್ ಹೊಂದಿರುವವರು ಚಿಕಿತ್ಸಾ ವೆಚ್ಚದ ಕೇವಲ 30 ಶೇಕಡಾ ಮೊತ್ತವನ್ನು ಮಾತ್ರ ಪಾವತಿಸಬೇಕಾಗುತ್ತದೆ. ಉಳಿದ 70 ಶೇಕಡಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದರಿಂದ ಮಧ್ಯಮ ವರ್ಗದ ಕುಟುಂಬಗಳಿಗೂ ದೊಡ್ಡ ಮಟ್ಟದ ನೆರವಾಗಲಿದೆ.
ಚಿಕಿತ್ಸೆ ಪಡೆಯುವುದು ಹೇಗೆ?
ಈ ಯೋಜನೆಯ ಸೌಲಭ್ಯ ಪಡೆಯಲು ಸಾರ್ವಜನಿಕರು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ನೋಂದಾಯಿತ ಸರ್ಕಾರಿ ಅಥವಾ ಆಯ್ದ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಬೇಕು. ಅಲ್ಲಿನ ಆಯುಷ್ಮಾನ್ ಮಿತ್ರ ಕೌಂಟರ್‌ನಲ್ಲಿ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಸಲ್ಲಿಸಿದ ಬಳಿಕ ದಾಖಲೆ ಪರಿಶೀಲನೆ ಮಾಡಿ ಚಿಕಿತ್ಸೆ ನೀಡಲಾಗುತ್ತದೆ.
ಅಗತ್ಯ ದಾಖಲೆಗಳು
ಚಾಲ್ತಿಯಲ್ಲಿರುವ ಬಿಪಿಎಲ್ ಅಥವಾ ಎಪಿಎಲ್ ರೇಷನ್ ಕಾರ್ಡ್
ಆಧಾರ್ ಕಾರ್ಡ್
ಈ ದಾಖಲೆಗಳಿದ್ದರೆ ಉಚಿತ ಅಥವಾ ರಿಯಾಯಿತಿ ದರದಲ್ಲಿ ದಂತ ಚಿಕಿತ್ಸೆ ಪಡೆಯಬಹುದಾಗಿದೆ.ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ಲಕ್ಷಾಂತರ ಜನರಿಗೆ ಆರೋಗ್ಯ ಭದ್ರತೆ ಮತ್ತಷ್ಟು ಬಲವಾಗಿದ್ದು, ರೇಷನ್ ಕಾರ್ಡ್ ಇದೀಗ ಆಹಾರ ಭದ್ರತೆಯ ಜೊತೆಗೆ ಆರೋಗ್ಯದ ಸಂಜೀವಿನಿಯೂ ಆಗಿದೆ. ಹಲ್ಲಿನ ಸಮಸ್ಯೆಯಿಂದ ಬಳಲುತ್ತಿರುವವರು ಇನ್ನು ಮುಂದೆ ಹಣದ ಚಿಂತೆಯಿಲ್ಲದೆ ಸರ್ಕಾರಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















