Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಎಸ್.ಐ.ಆರ್ ಪ್ರಕ್ರಿಯೆ ಶೇ.96 ರಷ್ಟು ಮ್ಯಾಪಿಂಗ್ ಪೂರ್ಣ ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟ್‌ರನ್ನು ನೇಮಿಸಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ

---Advertisement---

ಚಿತ್ರದುರ್ಗ.ಮೇ.21: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಎಸ್.ಐ.ಆರ್(ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ) ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಶೇ.96 ರಷ್ಟು ಮತದಾರರ ಮ್ಯಾಪಿಂಗ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಮುಂಬರುವ ಜೂನ್ 30 ರಿಂದ ಜುಲೈ 29ವರೆಗೆ ಬಿ.ಎಲ್.ಓಗಳು ಮನೆ-ಮನೆ ಗಣತಿ ಕಾರ್ಯ ಕೈಗೊಳ್ಳಲಿದ್ದು, ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಿದ್ದಾರೆ. ಎಸ್.ಐ.ಆರ್ ಪ್ರಕ್ರಿಯೆಗೆ ಅನುವಾಗುವಂತೆ ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟ್‌ರನ್ನು ನೇಮಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು, ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ಎಸ್.ಎಸ್.ಆರ್ ಪ್ರಕ್ರಿಯೆ ಪಾರದರ್ಶಕತೆಯಿಂದ ಕೂಡಿದ್ದು, ಇದರ ಉದ್ದೇಶ ಅರ್ಹ ಮತದಾರರನ್ನು ಮತಪಟ್ಟಿಗೆ ಸೇರಿಸುವುದು ಮತ್ತು ಅನರ್ಹರನ್ನು ನಿಯಮಾನುಸಾರ ಕೈಬಿಡುವುದಾಗಿದೆ. ಯಾವುದೇ ತರಹದ ಸುಳ್ಳು ಮಾಹಿತಿ ಹಾಗೂ ಅಪಪ್ರಚಾರಗಳಿಗೆ ಕಿವಿಗೊಡಬಾರದು. ಎಸ್.ಐ.ಆರ್ ಕಾರ್ಯವು ಅತ್ಯಂತ ಎಚ್ಚರಿಕೆಯಿಂದ ನಡೆಯುತ್ತಿದೆ. 2002ರಲ್ಲಿ ಮತದಾರರ ಪಟ್ಟಿಯ ಕೊನೆಯ ವಿಶೇಷ ಸಮಗ್ರ ಪರಿಷ್ಕರಣೆ ನಡೆದಿದೆ. ಈ ಮತದಾರರ ಪಟ್ಟಿಯನ್ನು ಆಧರಿಸಿ ಫ್ಯಾಮಿಲಿ ಲಿಂಕೇಜ್ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ. ಕುಟುಂಬದ ಮುಖ್ಯಸ್ಥರ ಹೆಸರು 2002ರ ಪಟ್ಟಿಯಲ್ಲಿದ್ದರೆ, ಹೊಸದಾಗಿ ಅರ್ಹತೆ ಪಡೆಯುವ ಕುಟುಂಬದ ಇತರ ಸದಸ್ಯರ ಹೆಸರನ್ನು ಸೇರ್ಪಡೆ ಮಾಡುವುದು ಸುಲಭವಾಗುತ್ತದೆ. ಮದುವೆಯಾಗಿ ಅಥವಾ ವಲಸೆ ಬಂದು ಇಲ್ಲಿ ನೆಲೆಸಿರುವವರ ಹೆಸರು ಹಳೆಯ ವೋಟರ್ ಲಿಸ್ಟ್ನಲ್ಲಿ ಇಲ್ಲದಿದ್ದರೆ, ಅವರಿಗೆ ಫ್ಯಾಮಿಲಿ ಲಿಂಕೇಜ್ ಸಿಗುವುದಿಲ್ಲ. ಈ ಹಿಂದೆ ಅವರು ವಾಸವಾಗಿದ್ದ ಸ್ಥಳದಲ್ಲಿನ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇದ್ದರೆ, ಆ ಮಾಹಿತಿ ಹೆಸರು ಸೇರ್ಪಡೆ ನೀಡಬಹುದು. ಈಗಾಗಲೇ ಜಿಲ್ಲೆಯ ಶೇ.96 ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸಿದ್ದು, ಶೇ. 4 ರಷ್ಟು ಮತದಾರರ ಮ್ಯಾಪಿಂಗ್ ಬಾಕಿ ಉಳಿದಿದೆ. ಮ್ಯಾಪಿಂಗ್ ಆಗದೆ ಇರುವವರು ಮನೆ ಗಣತಿ ಫಾರಂ ಜೊತೆ ಚುನಾವಣಾ ಆಯೋಗ ನಿಗದಿಪಡಿಸಿದ ಅಧಿಕೃತ ದಾಖಲೆಗಳಲ್ಲಿ ಯಾವುದಾದರು ಒಂದು ದಾಖಲೆ ನೀಡಿದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು. ಹೊರಗಿನಿಂದ ಬಂದು ವಾಸಿಸುತ್ತಿರುವ ಉದ್ಯೋಗಿಗಳು, ವಲಸಿಗರು ಹಾಗೂ ಮದುವೆಯಾಗಿ ಬಂದಿರುವ ಹೊಸ ಮತದಾರರನ್ನು ಗುರುತಿಸಿ, ಭಾರತದ ನಾಗರಿಕರೆಂದು ದೃಢೀಕರಿಸುವ ಅಧಿಕೃತ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಪಡೆದು ಪಟ್ಟಿಗೆ ಸೇರಿಸಲು ಕ್ರಮ ವಹಿಸಲಾಗುವುದು. ಸೂಕ್ತ ಮರಣ ಪ್ರಮಾಣ ಪತ್ರ ನೀಡದ ಹೊರತು ಯಾರ ಹೆಸರನ್ನೂ ಮತದಾರರ ಪಟ್ಟಿಯಿಂದ ಕಡಿತಗೊಳಿಸುವುದಿಲ್ಲ. ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟರನ್ನು ನೇಮಿಸಿದರೆ, ಅವರಿಗೆ ಎಸ್.ಐ.ಆರ್ ಕುರಿತು ಸೂಕ್ತ ತರಬೇತಿಯನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

 

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, 2026ರ ಮೇ 20ರ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 1661 ಮತಗಟ್ಟೆಗಳು ಇದ್ದು ಒಟ್ಟು 14,40,922 ಮತದಾರರು ಇದ್ದಾರೆ. 24 ವರ್ಷಗಳ ಸುದೀರ್ಘ ಅವಧಿಯ ಬಳಿಕ ರಾಜ್ಯದಲ್ಲಿ ಇದೀಗ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ. ವಿಧಾನಪರಿಷತ್ ಚುನಾವಣೆ ಮಾದರಿಯಲ್ಲಿಯೇ ಈ ಬಾರಿ ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. 2025ರ ಜನವರಿಯಲ್ಲಿ ಅಂತಿಮಗೊAಡಿದ್ದ ಮತದಾರರ ಪಟ್ಟಿಯನ್ನೇ ಮೂಲ ಆಧಾರವಾಗಿಟ್ಟುಕೊಂಡು, 2002ರ ಕೊನೆಯ ಎಸ್‌ಐಆರ್ ಪಟ್ಟಿಯೊಂದಿಗೆ ಮ್ಯಾಪಿಂಗ್ ಮಾಡಲಾಗುತ್ತಿದೆ ಎಂದರು.

 

ಎಸ್.ಐ.ಆರ್. ಪ್ರಕ್ರಿಯೆ ಅಂಗವಾಗಿ, ಜೂನ್ 20 ರಿಂದ 29 ವರೆಗೆ, ತರಬೇತಿ ಹಾಗೂ ಮುದ್ರಣ ತಯಾರಿ ಮಾಡಿಕೊಳ್ಳಲಾಗುವುದು. ಜೂನ್ 30 ರಿಂದ ಜುಲೈ 29 ವರೆಗೆ ಒಂದು ತಿಂಗಳ ಕಾಲ ಜಿಲ್ಲೆಯಾದ್ಯಂತ ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡುವರು. ಈ ವೇಳೆ ಪ್ರತಿ ಮತದಾರರಿಗೂ ಮುದ್ರಿತವಾದ ಎನ್ಯೂಮರೇಷನ್ ಫಾರಂ ನೀಡುವರು. ಎನ್ಯೂಮರೇಷನ್ ದ್ವಿಪ್ರತಿಯಲ್ಲಿದ್ದು, ಒಂದು ಪ್ರತಿಯನ್ನು ಮತದಾರರಿಗೆ ನೀಡಿ, ಮತ್ತೊಂದು ಪ್ರತಿಯಲ್ಲಿ ಮತದಾರರ ಸಹಿ ಪಡೆದು ತಮ್ಮಲ್ಲಿಯೇ ಇರಿಸಿಕೊಳ್ಳಲ್ಲಿದ್ದಾರೆ. ತದನಂತರ ಈ ಸಹಿ ಮಾಡಿದ ಫಾರಂ ಅನ್ನು ಸ್ಕಾö್ಯನ್ ಮಾಡಿ ಚುನಾವಣಾ ಆಯೋಗದ ತಂತ್ರಾAಶದಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ಈಗಾಗಲೇ ಮ್ಯಾಪಿಂಗ್ ಆಗಿರುವ ಮತದಾರರು ಯಾವುದೇ ರೀತಿಯ ಹೆಚ್ಚುವರಿ ದಾಖಲೆಗಳನ್ನು ನೀಡುವ ಅಗತ್ಯವಿರುವುದಿಲ್ಲ. ಆದರೆ, ಮ್ಯಾಪಿಂಗ್ ಆಗದವರು ತಾವು ಭಾರತದ ಪ್ರಜೆ ಎಂಬುದನ್ನು ಸಾಬೀತುಪಡಿಸಲು ಅಗತ್ಯ ದಾಖಲಾತಿಗಳನ್ನು ನೀಡಬೇಕಾಗುತ್ತದೆ. ಬಿಎಲ್‌ಒಗಳು ಕನಿಷ್ಠ ಮೂರು ಬಾರಿ ಮನೆಗೆ ಭೇಟಿ ನೀಡಲಿದ್ದು, ಒಂದು ವೇಳೆ ಮತದಾರರು ಸಿಗದಿದ್ದಲ್ಲಿ ಮಹಜರು ಸಿದ್ಧಪಡಿಸಿ ವರದಿ ನೀಡಲಿದ್ದಾರೆ. ಮತದಾರರ ಪೈಕಿ ಅವರ ಮನೆಯ ಹಿರಿಯ ನಾಗರಿಕರೂ ಸಹ ಸಹಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

 

ಚುನಾವಣೆ ಆಯೋಗದ ನಿಮಯದಂತೆ ಜುಲೈ 29ರ ಒಳಗಾಗಿ ಮತದಾನ ಕೇಂದ್ರಗಳ ರ‍್ಯಾಷನಲೈಜೇಷನ್ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ. ಆಗಸ್ಟ್ 5, ರಂದು ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು. ಮತದಾರ ಪಟ್ಟಿಗೆ ಆಕ್ಷೇಪಣೆಗಳ ಸಲ್ಲಿಕೆಗೆ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು ಅಕ್ಟೋಬರ್ 3 ಒಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಸಾರ್ವಜನಿಕರಿಂದ ಬರುವ ಆಕ್ಷೇಪಣೆಗಳ ಇತ್ಯರ್ಥದ ನಂತರ, ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು.
2026 ಅಕ್ಟೋಬರ್ 1 ತಾರೀಖಿಗೆ ಯಾರಿಗೆ 18 ವರ್ಷ ತುಂಬುತ್ತದೆಯೋ, ಅಂತಹ ಹೊಸ ಮತದಾರರು ಸಹ ತಮ್ಮ ಹೆಸರನ್ನು ಪಟ್ಟಿಗೆ ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಹೊಸ ಮತದಾರರು ಅಗತ್ಯ ದಾಖಲೆಗಳೊಂದಿಗೆ ಫಾರಂ-6 ನೀಡುವ ಮೂಲಕ ಹೆಸರು ಸೇರಿಸಬಹುದು. ಹೆಸರು ತೆಗೆದುಹಾಕಲು ಅಥವಾ ಆಕ್ಷೇಪಣೆ ಸಲ್ಲಿಸಲು ಫಾರಂ-7, ಹಾಗೂ ವಿಳಾಸ, ಹೆಸರು, ವಯಸ್ಸು ಮತ್ತು ಭಾವಚಿತ್ರ ತಿದ್ದುಪಡಿಗಳಿಗಾಗಿ ಫಾರಂ-8 ಅನ್ನು ಬಳಸಬಹುದಾಗಿದೆ.

 

ಜಿಲ್ಲೆಯಲ್ಲಿ ಒಟ್ಟು 1,661 ಮತಗಟ್ಟೆಗಳಿದ್ದರೂ, ರಾಜಕೀಯ ಪಕ್ಷಗಳಿಂದ ಬೂತ್ ಮಟ್ಟದ ಏಜೆಂಟರ ನೇಮಕ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿದೆ. ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ರಾಜಕೀಯ ಪಕ್ಷಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ನಡೆಯುವ ಸಭೆಗಳಲ್ಲಿ ಪಕ್ಷಗಳ ಪ್ರತಿನಿಧಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಪ್ರತಿಯೊಂದು ರಾಜಕೀಯ ಪಕ್ಷಗಳು ತಮ್ಮ ಮಟ್ಟದಲ್ಲಿ ಬೂತ್ ಮಟ್ಟದ ಏಜೆಂಟರನ್ನು ತಕ್ಷಣವೇ ನೇಮಕ ಮಾಡಿ ನಮಗೆ ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮನವಿ ಮಾಡಿದರು.

 

ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ಬಿ.ಬಿ.ಪಾತೀಮಾ, ಚುನಾವಣೆ ಶಿರೇಸ್ತೆದಾರ್ ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಜೆ.ಡಿ.ಎಲ್. ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯ್ಕ್, ಜಿ.ಜೆ.ಪಿ. ಪಕ್ಷದ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಯಶವಂತ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಪಿ.ಎಂ.ಮAಜುನಾಥ್, ಎ.ಎ.ಪಿ ಪಕ್ಷದ ಎಂ.ವಿ.ಲೋಕೇಶ್, ಸಿಪಿಐ(ಎಂ) ಪಕ್ಷದ ಗೌಸ್ ಪೀರ್ ಸೇರಿದಂತೆ ಮತ್ತತರರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now