Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭೂಮಿ ಹಕ್ಕುಪತ್ರಕ್ಕಾಗಿ ಅನಿರ್ಧಿಷ್ಟಾವಧಿ ಹೋರಾಟ : ಮನವಿ ಆಲಿಸಿದ ಎಂ.ಕೆ.ತಾಜ್‍ಪೀರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಮೇ. 21 : ಜಿಲ್ಲೆಯ ಬಗರ್ ಹುಕುಂ ಸಾಗುವಳಿದಾರರು ಭೂಮಿ ಹಕ್ಕುಪತ್ರಕ್ಕಾಗಿ ಒತ್ತಾಯಿಸಿ ಕಳೆದ ಹನ್ನೊಂದು ದಿನಗಳಿಂದಲೂ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತಿರುವ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಗುರುವಾರ ಭೇಟಿ ನೀಡಿ ನಿಮ್ಮ ಅಹವಾಲುಗಳನ್ನು ಜಿಲ್ಲೆಯ ಎಲ್ಲಾ ಶಾಸಕರ ಗಮನಕ್ಕೆ ತರುವುದಾಗಿ ಬಗರ್‍ಹುಕುಂ ಸಾಗುವಳಿದಾರರಿಗೆ ಭರವಸೆ ನೀಡಿದರು.

 

ಬುಧವಾರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ನಾನು ಇರಲಿಲ್ಲ. ಹಾಗಾಗಿ ನಿಮ್ಮ ಮನವಿಯೊಂದನ್ನು ನನಗೂ ಕೊಡಿ. ಜಿಲ್ಲೆಯಲ್ಲಿ ಬಗರ್‍ಹುಕುಂ ಸಾಗುವಳಿ ಮಾಡುತ್ತಿರುವವರ ಸಮಸ್ಯೆಗಳನ್ನು ಅಲಿಸಿ ಭೂಮಿ ಹಕ್ಕು ಪತ್ರ ನೀಡುವಂತೆ ಜಿಲ್ಲೆಯ ಎಲ್ಲಾ ಶಾಸಕರುಗಳಲ್ಲಿ ನಿವೇದಿಸಿಕೊಳ್ಳುತ್ತೇನೆ. ನಿಮ್ಮ ಹೋರಾಟ ನ್ಯಾಯಯುತವಾಗಿದೆ. ರಾಜ್ಯ ಸರ್ಕಾರ ನಿಮ್ಮ ಬೇಡಿಕೆಗಳನ್ನು ಪರಿಶೀಲಿಸಿ ಸಾಗುವಳಿ ಪತ್ರಗಳನ್ನು ನೀಡುವ ವಿಶ್ವಾಸವಿದೆ ಎಂದರು.

 

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್, ಮುದಸಿರ್ ನವಾಜ್, ಆರತಿ ಮಹಡಿ ಶಿವಮೂರ್ತಿ, ಯು.ಲಕ್ಷ್ಮಿಕಾಂತ್, ಸೈಯದ್ ಮೊಹಿದ್ದೀನ್, ಭೂತೇಶ್ ಇನ್ನು ಮುಂತಾದವರು ಈ ಸಂದರ್ಭದಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now