Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಿಗೆ 6,000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನೇಮಕ : ಸರ್ಕಾರದ ಗ್ರೀನ್ ಸಿಗ್ನಲ್!

---Advertisement---

ಸುದ್ದಿಒನ್,ಬೆಂಗಳೂರು,ಮೇ.22: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಯಾವುದೇ ತೊಂದರೆಯಾಗದಂತೆ ತಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಹತ್ವದ ಹೆಜ್ಜೆಯಿಟ್ಟಿದೆ. ಕಾಲೇಜುಗಳಲ್ಲಿ ಖಾಲಿ ಬಿದ್ದಿರುವ ಬೋಧಕರ ಕೊರತೆಯನ್ನು ನೀಗಿಸಲು ಬರೋಬ್ಬರಿ 6,086 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಧಿಕೃತ ಮುದ್ರೆ ಒತ್ತಿದೆ.

ಈ ವರ್ಷ 100 ಸರ್ಕಾರಿ ಪಿಯು ಕಾಲೇಜುಗಳಲ್ಲಿ ಹೊಸದಾಗಿ ಕಂಪ್ಯೂಟರ್ ಸೈನ್ಸ್ (Computer Science) ಕೋರ್ಸ್ ಪರಿಚಯಿಸಲಾಗಿದೆ. ಇದರ ಜೊತೆಗೆ 60 ಕಾಲೇಜುಗಳನ್ನು ‘ಆದರ್ಶ ಕಾಲೇಜುಗಳಾಗಿ’ ಮೇಲ್ದರ್ಜೆಗೆ ಏರಿಸಲಾಗಿದೆ. ನಿವೃತ್ತಿ ಮತ್ತು ಪ್ರಮೋಷನ್ಗಳಿಂದ ಖಾಲಿಯಾದ ಜಾಗಗಳನ್ನೂ ಒಳಗೊಂಡಂತೆ ಒಟ್ಟು 6,687 ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಹಾಗೂ 93.61 ಕೋಟಿ ರೂ. ಅನುದಾನ ನೀಡುವಂತೆ ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯವು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

ಆದರೆ, ಪ್ರಸಕ್ತ ಸಾಲಿನ ಆಯವ್ಯಯದಲ್ಲಿ (Budget) ಕಳೆದ ವರ್ಷದಷ್ಟೇ ಸಂಖ್ಯೆಯ ಶಿಕ್ಷಕರ ನೇಮಕಕ್ಕೆ ಕೇವಲ 85.20 ಕೋಟಿ ರೂಪಾಯಿಗಳನ್ನು ಮಾತ್ರ ಮೀಸಲಿಡಲಾಗಿತ್ತು. ಹೀಗಾಗಿ, ಆರ್ಥಿಕ ಮಿತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಇಲಾಖೆಯ ಬೇಡಿಕೆಗಿಂತ ಕೊಂಚ ಕಡಿಮೆ, ಅಂದರೆ 6,086 ಹುದ್ದೆಗಳ ಭರ್ತಿಗೆ ಮಾತ್ರ ಅನುಮತಿ ನೀಡಿದೆ.

ತಿಂಗಳಿಗೆ 14 ಸಾವಿರ ಗೌರವಧನ; 10 ತಿಂಗಳ ಸೇವೆ
ಪ್ರಮುಖ ಮಾಹಿತಿ:

ಒಟ್ಟು ಹುದ್ದೆಗಳು: 6,086 ಅತಿಥಿ ಉಪನ್ಯಾಸಕರು

ಸೇವಾ ಅವಧಿ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಟ್ಟು 10 ತಿಂಗಳು

ಮಾಸಿಕ ಗೌರವಧನ: 14,000 ರೂಪಾಯಿಗಳು

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now