ಸುದ್ದಿಒನ್,ನವದೆಹಲಿ,ಮೇ.22: ದೇಶದ ಹತ್ತು ರಾಜ್ಯಗಳಲ್ಲಿ ಮುಂಬರುವ ದಿನಗಳಲ್ಲಿ ತೆರವಾಗಲಿರುವ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಶುಕ್ರವಾರ ಮಹತ್ವದ ಪ್ರಕಟಣೆ ಹೊರಡಿಸಿದೆ.
ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ರಾಜ್ಯಸಭಾ ಸದಸ್ಯರ ಅಧಿಕಾರಾವಧಿಯು ಜೂನ್ 21 ರಿಂದ ಜುಲೈ 19 ರ ನಡುವಿನ ವಿವಿಧ ದಿನಾಂಕಗಳಂದು ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ತೆರವಾಗಲಿರುವ ಸ್ಥಾನಗಳನ್ನು ಭರ್ತಿ ಮಾಡಲು ಆಯೋಗವು ಅಧಿಕೃತ ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ಚುನಾವಣೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ಗುಜರಾತ್ ರಾಜ್ಯಗಳಿಂದ ತಲಾ ನಾಲ್ಕು ಸ್ಥಾನಗಳಿಗೆ ಮತದಾನ ನಡೆಯಲಿದ್ದರೆ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಿಂದ ತಲಾ ಮೂರು ಸ್ಥಾನಗಳಿಗೆ ಚುನಾವಣೆ ಜರುಗಲಿದೆ. ಉಳಿದಂತೆ ಜಾರ್ಖಂಡ್ನ 2 ಸ್ಥಾನಗಳು ಹಾಗೂ ಈಶಾನ್ಯ ರಾಜ್ಯಗಳಾದ ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ತಲಾ ಒಂದು ಸ್ಥಾನಗಳಿಗೂ ಜೂನ್ 18 ರಂದೇ ಮತದಾನ ಪ್ರಕ್ರಿಯೆ ನಡೆಯಲಿದೆ.
ಚುನಾವಣಾ ವೇಳಾಪಟ್ಟಿಯ ಪ್ರಕಾರ, ಅಭ್ಯರ್ಥಿಗಳು ಜೂನ್ 8 ರೊಳಗೆ ತಮ್ಮ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದ್ದು, ಜೂನ್ 18 ರಂದು ಮತದಾನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















