Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಸಣ್ಣ ಮಳೆಗೇ ಕೆರೆಯಾಗುವ ರೈಲ್ವೆ ಕೆಳ ಸೇತುವೆ ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ 22: ನಗರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹಾದುಹೋಗಿರುವ ಮಾರುತಿ ನಗರದ ಸಮೀಪದ ರೈಲ್ವೆ ಸೇತುವೆಯ ಕೆಳಭಾಗವು ಸಾರ್ವಜನಿಕರ ಪಾಲಿಗೆ ನರಕಸದೃಶವಾಗಿ ಮಾರ್ಪಟ್ಟಿದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಇಲ್ಲಿನ ಅವ್ಯವಸ್ಥೆಗಳು ತಾರಕಕ್ಕೇರಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಯಾತನೆ ಅನುಭವಿಸುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಪ್ರಮುಖ ಬಡಾವಣೆಗಳಾದ ಮಾರುತಿ ನಗರ ಮತ್ತು ವಿದ್ಯಾ ನಗರಗಳಿವೆ. ಇಲ್ಲಿ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ, ಸಣ್ಣ ಮಳೆ ಬಂದರೂ ಸಾಕು ಇಡೀ ಸೇತುವೆಯ ಕೆಳಭಾಗ ಕೆರೆಯಂತಾಗುತ್ತದೆ. ಮಳೆ ನೀರು ಮೊಣಕಾಲುದ್ದ ನಿಲ್ಲುವುದರಿಂದ ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಸೇತುವೆಯ ಕೆಳಗೆ ಕೇವಲ ಮಳೆ ನೀರಿನದ್ದಷ್ಟೇ ಸಮಸ್ಯೆಯಲ್ಲ. ಸೂಕ್ತ ನಿರ್ವಹಣೆ ಇಲ್ಲದಿರುವುದನ್ನು ಬಂಡವಾಳ ಮಾಡಿಕೊಂಡಿರುವ ಕೆಲ ಸಾರ್ವಜನಿಕರು ಸಿಕ್ಕಸಿಕ್ಕಲ್ಲಿ ಕಸ ತಂದು ಹಾಕುತ್ತಿದ್ದಾರೆ. ಇದರಿಂದಾಗಿ ಇಡೀ ಪ್ರದೇಶ ದುರ್ನಾತ ಬೀರುತ್ತಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.

ಇನ್ನೂ ಕತ್ತಲಾಗುತ್ತಿದ್ದಂತೆ ಈ ಭಾಗದಲ್ಲಿ ಸಂಚರಿಸುವುದು ಸಾಹಸದ ಕೆಲಸವೇ ಸರಿ. ಸೇತುವೆಯ ಎರಡೂ ಬದಿಗಳಲ್ಲಿ ಬೀದಿ ದೀಪಗಳ ವ್ಯವಸ್ಥೆ ಇಲ್ಲದಿರುವುದರಿಂದ ಇಡೀ ರಸ್ತೆ ಕತ್ತಲಲ್ಲಿ ಮುಳುಗುತ್ತದೆ. ಇದರಿಂದಾಗಿ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ಮತ್ತು ವಿದ್ಯಾರ್ಥಿಗಳು ಸಂಜೆ ವೇಳೆ ಇಲ್ಲಿ ಓಡಾಡಲು ಭಯಪಡುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲೇ ಇಂತಹ ದುಃಸ್ಥಿತಿ ಇದ್ದರೂ ಯಾವುದೇ ದೊಡ್ಡ ಅನಾಹುತ ಸಂಭವಿಸುವ ಮುನ್ನವೇ ಎಚ್ಚೆತ್ತುಕೊಂಡು, ಸಂಬಂಧಪಟ್ಟ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ. ಇಲ್ಲಿನ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ವ್ಯವಸ್ಥೆ ಮಾಡಬೇಕು, ಬೀದಿ ದೀಪಗಳನ್ನು ಅಳವಡಿಸಬೇಕು ಮತ್ತು ಕಸ ಹಾಕದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾರುತಿನಗರ ಹಾಗೂ ವಿದ್ಯಾನಗರ ಬಡಾವಣೆಯ ನಿವಾಸಿಗಳು ಮತ್ತು ಸಾರ್ವಜನಿಕರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now