ಸುದ್ದಿಒನ್,ಬೆಂಗಳೂರು,ಮೇ.23: ರಾಜ್ಯದ ಜನರೇ ಎಚ್ಚರ! ಮುಂದಿನ ಎರಡು ದಿನಗಳ ಕಾಲ ಸಿಲಿಕಾನ್ ಸಿಟಿ ಬೆಂಗಳೂರು ಒಳಗೊಂಡಂತೆ ಕರ್ನಾಟಕದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದೆ. ಈ ಕುರಿತು ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದ್ದು, ರಾಜ್ಯದ ಒಟ್ಟು 14 ಜಿಲ್ಲೆಗಳಿಗೆ ಹೈ ಅಲರ್ಟ್ ಜಾರಿಗೊಳಿಸಿದೆ.
ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆಯು ವಿವಿಧ ಪ್ರದೇಶಗಳ ಪರಿಸ್ಥಿತಿಗೆ ಅನುಗುಣವಾಗಿ ‘ಆರೆಂಜ್’ ಹಾಗೂ ‘ಯೆಲ್ಲೋ’ ಅಲರ್ಟ್ ಘೋಷಿಸಿದೆ.

ಈ 4 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಮುನ್ಸೂಚನೆ

ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಈ ಕೆಳಗಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಇಲ್ಲಿ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ.ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದಲ್ಲೂ ಮಳೆಯ ಪ್ರಭಾವ ಜೋರಾಗಿರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಾವಣಗೆರೆ, ವಿಜಯನಗರ, ರಾಮನಗರ, ಚಾಮರಾಜನಗರ ಸೇರಿದಂತೆ ಯಾದಗಿರಿ, ರಾಯಚೂರು ಹಾಗೂ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ.










