Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ: ಚಿರತೆ ದಾಳಿ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ : ದೊಡ್ಡಚೆಲ್ಲೂರಿನಲ್ಲಿ ಬೋನು ಅಳವಡಿಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್,ಚಳ್ಳಕೆರೆ ,ಮೇ.24: ತಾಲೂಕಿನ ದೊಡ್ಡಚೆಲ್ಲೂರು ಗ್ರಾಮದಲ್ಲಿ ಕುರಿಗಾಯಿಗಳ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಇದೀಗ ಚಿರತೆ ಸೆರೆ ಹಿಡಿಯುವ ಉದ್ದೇಶದಿಂದ ದೊಡ್ಡಚೆಲ್ಲೂರು ಗ್ರಾಮದ ಸಮೀಪ ಚಿರತೆ ಸೆರೆಗೆ ಬೋನು ಅಳವಡಿಸಲಾಗಿದೆ.

ಇದೇ ವೇಳೆ, ಗ್ರಾಮಸ್ಥರು ಹಾಗೂ ಪಶುಪಾಲಕರಿಗೆ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಅರಿವು ಮೂಡಿಸಿದರು.
ದೊಡ್ಡಚಲ್ಲೂರು ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ರಾತ್ರಿ ವೇಳೆ ಎಚ್ಚರಿಕೆಯಿಂದ ಸಂಚರಿಸುವಂತೆ ಮತ್ತು ಕುರಿ ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರಿಸುವಂತೆ ಅರಣ್ಯ ಅಧಿಕಾರಿ ಅಶೋಕ ಸಲಹೆ ನೀಡಿದ್ದಾರೆ. ಕಾಡು ಪ್ರಾಣಿಗಳ ದಾಳಿ ಸಂಭವಿಸಿದ ಸಂದರ್ಭಗಳಲ್ಲಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಎನ್. ರಾಜೇಶ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮಸ್ಥರು, ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now