ಸುದ್ದಿಒನ್,ಬೆಂಗಳೂರು,ಮೇ.25:ರಾಜ್ಯದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಗರಿಗೆದರುತ್ತಿದ್ದು, ಅನ್ನದಾತರು ಬಿತ್ತನೆ ಕಾರ್ಯಕ್ಕೆ ಭೂಮಿ ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಮಾರುಕಟ್ಟೆಯಲ್ಲಿ ಕಳಪೆ ಗುಣಮಟ್ಟದ ಕೃಷಿ ಪರಿಕರಗಳ ಮಾರಾಟ ಹಾಗೂ ರೈತರನ್ನು ವಂಚಿಸುವ ಜಾಲ ಸಕ್ರಿಯವಾಗುವ ಸಾಧ್ಯತೆ ಇರುತ್ತದೆ. ಇದನ್ನು ತಡೆಗಟ್ಟಲು ಮತ್ತು ರೈತರ ಹಿತರಕ್ಷಣೆಗಾಗಿ ಕೃಷಿ ಇಲಾಖೆ ಹಾಗೂ ಸರ್ಕಾರ ಈಗ ಮಹತ್ವದ ಹೆಜ್ಜೆ ಇಟ್ಟಿದೆ.
ರೈತರು ತಾವು ಕಷ್ಟಪಟ್ಟು ದುಡಿದ ಹಣವನ್ನು ನಕಲಿ ಉತ್ಪನ್ನಗಳಿಗೆ ಸುರಿದು ಮೋಸ ಹೋಗಬಾರದು ಎಂಬ ಉದ್ದೇಶದಿಂದ ಕಟ್ಟುನಿಟ್ಟಿನ ನಿಗಾ ವಹಿಸಲಾಗುತ್ತಿದ್ದು, ತುರ್ತು ದೂರು ಸಲ್ಲಿಸಲು ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ಕೆಲವು ಕಡೆ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಅಥವಾ ಕಳಪೆ ದರ್ಜೆಯ ಕೀಟನಾಶಕಗಳನ್ನು ರೈತರಿಗೆ ನೀಡಿ ವಂಚಿಸುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಇಂತಹ ದಂಧೆಕೋರರಿಗೆ ಲಗಾಮು ಹಾಕಲು ಕೃಷಿ ಇಲಾಖೆ ಸಜ್ಜಾಗಿದೆ.ಖರೀದಿ ಸಮಯದಲ್ಲಿ ಯಾವುದೇ ರೀತಿಯ ಸಂಶಯಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ಅಥವಾ ವ್ಯಾಪಾರಿಗಳು MRP ಗಿಂತ ಅಧಿಕ ಹಣ ಪೀಕುತ್ತಿದ್ದರೆ, ಅನ್ನದಾತರು ತಕ್ಷಣವೇ ಧ್ವನಿ ಎತ್ತಿ ದೂರು ನೀಡಬಹುದಾಗಿದೆ.

ಮನೆಯಲ್ಲೇ ಕುಳಿತು ದೂರು ನೀಡಿ: ಇಲ್ಲಿದೆ ಕಿಸಾನ್ ಸಹಾಯವಾಣಿ
ರೈತರ ನೆರವಿಗಾಗಿ ಕೇಂದ್ರ ಕೃಷಿ ಮಂತ್ರಾಲಯವು ‘ಕಿಸಾನ್ ಸಹಾಯವಾಣಿ’ (Kisan Helpline) ಕೇಂದ್ರವನ್ನು ತೆರೆದಿದೆ. ಯಾವುದೇ ಆತಂಕವಿಲ್ಲದೆ ರೈತರು ತಮ್ಮ ಮೊಬೈಲ್ ಮೂಲಕವೇ ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸಿ ವಂಚಕರ ವಿರುದ್ಧ ದೂರು ದಾಖಲಿಸಬಹುದಾಗಿದೆ. ಸಹಾಯವಾಣಿ ಸಂಖ್ಯೆ (Toll-Free Number) 1800-180-1551 ಸಂಪರ್ಕಿಸುವ ಸಮಯ: ಪ್ರತಿದಿನ ಬೆಳಿಗ್ಗೆ 6:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











