Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಲಾ ಬಿಸಿಯೂಟಕ್ಕೆ ಸ್ಥಳೀಯವಾಗಿ ತೊಗರಿಬೇಳೆ ಖರೀದಿಸಲು ರಾಜ್ಯ ಸರ್ಕಾರ ಅನುಮತಿ

---Advertisement---

ಸುದ್ದಿಒನ್,ಬೆಂಗಳೂರು,ಮೇ.26: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಪೂರ್ವ ಪ್ರಾಥಮಿಕ ಹಾಗೂ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಒದಗಿಸಲಾಗುವ ಬಿಸಿಯೂಟದ (PM POSHAN) ವ್ಯವಸ್ಥೆಗೆ ಯಾವುದೇ ತೊಂದರೆಯಾಗದಂತೆ, ಶಾಲಾ ಹಂತದಲ್ಲೇ ಸ್ಥಳೀಯವಾಗಿ ತೊಗರಿಬೇಳೆ/ಕಾಳುಗಳನ್ನು ಖರೀದಿಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.

ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು ಈ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ (CEO) ಅಧಿಕೃತ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.

ಶಾಲಾ ಹಂತದಲ್ಲಿ ಖರೀದಿಸುವ ತೊಗರಿಬೇಳೆಯ ಗರಿಷ್ಠ ದರವನ್ನು ಪ್ರತಿ ಕೆಜಿಗೆ ₹105 ಕ್ಕೆ ಸೀಮಿತಗೊಳಿಸಲಾಗಿದೆ.ಈ ಹಿಂದೆ ಜಿಲ್ಲೆಗಳಿಂದ ತೊಗರಿಬೇಳೆಯ ಗುಣಮಟ್ಟದ ಕುರಿತು ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ, ಈ ಬಾರಿ ಟೆಂಡರ್ ಪ್ರಕ್ರಿಯೆಯ ನಿಯಮಗಳಲ್ಲಿ ಬದಲಾವಣೆ ತಂದು ಉತ್ತಮ ಗುಣಮಟ್ಟದ ಬೇಳೆಯನ್ನು ಸರಬರಾಜು ಮಾಡಲು ಕ್ರಮ ವಹಿಸಲಾಗುತ್ತಿದೆ.

ಪ್ರಸ್ತುತ ಹೊಸ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚಿನ ಸಮಯಾವಕಾಶ ಬೇಕಿರುವುದರಿಂದ ಮತ್ತು ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಇದ್ದ ಬಫರ್ ಸ್ಟಾಕ್ (ದಾಸ್ತಾನು) ಖಾಲಿಯಾಗಿರುವುದರಿಂದ, ಟೆಂಡರ್ ಪ್ರಕ್ರಿಯೆ ಮುಗಿಯುವವರೆಗೆ ಈ ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಿಕೊಳ್ಳಲು ಕೋರಲಾಗಿತ್ತು.

ಶಾಲೆಗಳಿಗೆ ಲಭ್ಯವಿರುವ ‘ಪರಿವರ್ತನಾ ವೆಚ್ಚದ’ (Conversion Cost) ನಿಯಮಾನುಸಾರ ಹಣವನ್ನು ಬಳಸಿಕೊಂಡು ಸ್ಥಳೀಯವಾಗಿ ಲಭ್ಯವಿರುವ ಗುಣಮಟ್ಟದ ತೊಗರಿಬೇಳೆ ಅಥವಾ ಇತರೆ ಬೇಳೆಕಾಳುಗಳನ್ನು ಖರೀದಿಸಲು ಸೂಚಿಸಲಾಗಿದೆ.ಯಾವುದೇ ಕಾರಣಕ್ಕೂ ಮಕ್ಕಳಿಗೆ ನೀಡುವ ಬಿಸಿಯೂಟದ ಕಾರ್ಯಕ್ರಮಕ್ಕೆ ಅಡ್ಡಿಯಾಗದಂತೆ ಹಾಗೂ ಯಾವುದೇ ರೀತಿಯ ತೊಂದರೆಯಾಗದಂತೆ ಜಾಗ್ರತೆ ವಹಿಸಿ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯ ಶಿಕ್ಷಕರಿಗೆ ಇಲಾಖೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now