ಸುದ್ದಿಒನ್,ನವದೆಹಲಿ,ಮೇ26: ಕರ್ನಾಟಕದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕಲು ಯತ್ನಿಸುತ್ತಿದ್ದ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಮತ್ತೊಮ್ಮೆ ಭಾರಿ ಹಿನ್ನಡೆಯಾಗಿದೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಸುಪ್ರೀಂ ಕೋರ್ಟ್ನ ಈ ಮಹತ್ವದ ತೀರ್ಪಿನ ಕುರಿತು ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಇದು ಕರ್ನಾಟಕದ ಜನತೆಗೆ ಸಿಕ್ಕ ಬಹುದೊಡ್ಡ ಜಯ. ಸುಪ್ರೀಂ ಕೋರ್ಟ್ನ ತೀರ್ಪಿನ ಪ್ರತಿ ನಮಗೆ ಲಭ್ಯವಾಗಿದೆ. ಸರ್ವೋಚ್ಛ ನ್ಯಾಯಾಲಯದ ಮೂವರು ನ್ಯಾಯಾಧೀಶರ ಪೀಠವು ತಮಿಳುನಾಡಿನ ಅರ್ಜಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಅದನ್ನು ತಿರಸ್ಕರಿಸಿದೆ” ಎಂದು ಅವರು ತಿಳಿಸಿದರು.
ಈ ಹಿಂದೆಯೂ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಕರ್ನಾಟಕದ ಪರವಾಗಿಯೇ ಇತ್ತು. ಆದರೆ, ತಮಿಳುನಾಡು ಸರ್ಕಾರ ಇದರ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಇದೀಗ ಆ ಅರ್ಜಿಯೂ ವಜಾಗೊಂಡಿರುವುದರಿಂದ ಮೇಕೆದಾಟು ಯೋಜನೆಯನ್ನು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಸಲು ಕರ್ನಾಟಕಕ್ಕೆ ಕಾನೂನಾತ್ಮಕವಾಗಿ ಹೆಚ್ಚಿನ ಬಲ ಸಿಕ್ಕಂತಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















