Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಜೂನ್ 13 ರಂದು ಬ್ರಾಂಡ್ ಚಿತ್ರದುರ್ಗ ಸಮಾವೇಶ : ಶಿವಪ್ರಸಾದ್ ಹೇಳಿಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 26 : ಜೂ.13 ರಂದು ವಾಲ್ಮೀಕಿ ಭವನದಲ್ಲಿ ಬ್ರಾಂಡ್ ಚಿತ್ರದುರ್ಗ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಎಕಾನಮಿಕ್ ಫೋರಂ, ಚಿತ್ರದುರ್ಗ ಚಾಪ್ಟರ್‍ನ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ತಿಳಿಸಿದರು.

 

ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೂಗಳು ಒಗ್ಗಟ್ಟಾಗಿ ವ್ಯಾಪಾರ ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎನ್ನುವ ಉದ್ದೇಶದಿಂದ ಸಮಾವೇಶ ನಡೆಯಲಿದ್ದು, ಬೀದರ್‍ನಿಂದ ಹಿಡಿದು ಮೈಸೂರುವರೆಗೂ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬ್ರಾಂಡ್ ಹೆಸರಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಬೆಂಗಳೂರಿನಿಂದ ತಂಡ ಆಗಮಿಸಲಿದ್ದು, ಜಿಲ್ಲೆಯಲ್ಲಿ ಸಿಗುವ ಉತ್ಪನ್ನಗಳನ್ನು ಹೊರಗೆ ಕಳಿಸುವ ಪ್ರಯತ್ನ ಸಮಾವೇಶದ ಉದ್ದೇಶ ಎಂದು ಹೇಳಿದರು.

 

ರಾಜ್ಯದಲ್ಲಿ ಐದು ಸೊಸೈಟಿಯಿದೆ. ಚಿತ್ರದುರ್ಗದಲ್ಲಿ ವಿ.ಡಿ.ಸಾವರ್ಕರ್ ಸೌಹಾರ್ಧ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಆರಂಭಗೊಂಡಿದ್ದು, 25 ಲಕ್ಷ ರೂ.ಗಳ ಠೇವಣಿಯಿದೆ. ಆರ್ಥಿಕ ಅಭಿವೃದ್ದಿಯನ್ನು ಗಮನದಲ್ಲಿಟ್ಟುಕೊಂಡು ಸೊಸೈಟಿಯನ್ನು ಮುನ್ನಡೆಸಿಕೊಂಡು ಹೋಗಲಾಗುವುದು ಎಂದರು.

 

ಚಿತ್ರದುರ್ಗವನ್ನು ಲಾಜಿಸ್ಟಿಕ್ ಹಬ್ ಅನ್ನಾಗಿ ಮಾಡುವುದು. ಪ್ರವಾಸೋದ್ಯಮ ಅಭಿವೃದ್ದಿ, ಮೊಳಕಾಲ್ಮುರು ಸೀರೆಗಳು ಮತ್ತು ಕೈಮಗ್ಗ ಉದ್ಯಮದ ಬೆಳವಣಿಗೆ
ಕೃಷಿ ಮತ್ತು ಕೃಷಿ ಆಧಾರಿತ ಉದ್ಯಮಗಳ ಅಭಿವೃದ್ದಿ, ಚಿತ್ರದುರ್ಗದ ರಫ್ತು ಸಾಮಥ್ರ್ಯ ಹೊಂದಿರುವ ಉತ್ಪನ್ನಗಳು, ಡಿಆರ್‍ಡಿಓ/ಐಐಎಸ್‍ಸಿ/ಇಸ್ರೊ ಸಂಬಂಧಿತ ಅವಕಾಶಗಳು, ಚಿತ್ರದುರ್ಗವನ್ನು ಕೈಗಾರಿಕಾ ಹಬ್ ಆಗಿ ರೂಪಿಸುವುದು, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ದಿ, ಮಹಿಳಾ ಉದ್ಯಮಿಗಳ ಬೆಳವಣಿಗೆ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುವುದೆಂದರು.

 

ರಾಘವೇಂದ್ರ ಮಾತನಾಡಿ ಸ್ಥಳೀಯ ಯುವಕರಿಗೆ ವ್ಯಾಪಾರಸ್ಥರಿಗೆ ಉದ್ಯಮಿಗಳಿಗೆ ಅನುಕೂಲವಾಗಲಿ ಎನ್ನುವುದು ಸಮಾವೇಶದ ಉದ್ದೇಶ. ಕಾರ್ಯಾಗಾರದ ಜೊತೆ ಸ್ಟಾಲ್‍ಗಳನ್ನು ಹಾಕಲಾಗುವುದು. ಜಿಲ್ಲೆಯ ಎಲ್ಲಾ ಜನತೆ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು. ನಾಗೇಂದ್ರ, ಅಶೋಕ್ ಟಿ.ಎಲ್. ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now