Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖಾಸಗಿ ಬಸ್‍ ಪ್ರಯಾಣ ದರ ಹೆಚ್ಚಳ ; ಬಸ್ ಮಾಲೀಕರ ಸಂಘ ತೀರ್ಮಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 26 : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದರಿಂದ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಏರಿಸಲು ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದಿಂದ ತೀರ್ಮಾನಿಸಲಾಯಿತು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಲ್ಲಿ ಮಂಗಳವಾರ ನಡೆದ ಖಾಸಗಿ ಬಸ್ ಮಾಲೀಕರ ಸಂಘದ ಸಭೆಯಲ್ಲಿ ಪ್ರಯಾಣಿಕರ ದರ ಏರಿಕೆ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

 

ಆಯಿಲ್, ಟೈರ್, ವಾಹನಗಳ ಬಿಡಿ ಭಾಗಗಳ ಬೆಲೆ ಗಗನಕ್ಕೆ ಏರಿದ್ದು, ಬಸ್‍ಗಳನ್ನು ಓಡಿಸಲು ಸಾಧ್ಯವಾಗುತ್ತಿಲ್ಲ. ಹಾಗೂ ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಮಹಿಳೆಯರು ನಮ್ಮ ಬಸ್‍ಗಳಲ್ಲಿ ಪ್ರಯಾಣಿಸುತ್ತಿಲ್ಲ. ಆರ್.ಟಿ.ಓ. ಕಚೇರಿಯಲ್ಲಿ ಎಲ್ಲಾ ರೀತಿಯ ಶುಲ್ಕವನ್ನು ನೂರರಷ್ಟು ಹೆಚ್ಚಿಸಲಾಗಿದೆ. ಇದರಿಂದ ಖಾಸಗಿ ಬಸ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯಾವುದೇ ರೀತಿಯ ತೆರಿಗೆ ಶುಲ್ಕವನ್ನು ಕಡಿಮೆ ಮಾಡಲು ಸಹಕರಿಸಲಿಲ್ಲ. ಈ ಹಿಂದೆ ಸರ್ಕಾರಿ ಬಸ್‍ಗಳ ಪ್ರಯಾಣ ದರ ಹೆಚ್ಚಳವಾದಾಗಲೂ ನಾವುಗಳು ಹಳೆ ದರದಲ್ಲಿಯೇ ಬಸ್‍ಗಳನ್ನು ಓಡಿಸಿದ್ದೇವೆ. ಇದರಿಂದ ಪ್ರತಿನಿತ್ಯ ಒಂದು ಬಸ್‍ಗೆ ಎರಡು ಸಾವಿರ ರೂ.ಗಳ ಹೆಚ್ಚಿನ ಹೊರೆಯಾಗುತ್ತಿದೆ. ಆದ್ದರಿಂದ ಬಸ್ ಪ್ರಯಾಣ ದರವನ್ನು ಶೀಘ್ರದಲ್ಲಿಯೇ ಹೆಚ್ಚಿಸಲು ದಿನಾಂಕ : 26-5-2026 ರಂದು ನಡೆದ ಖಾಸಗಿ ಬಸ್ ಮಾಲೀಕರ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತೆಂದು ಚಿತ್ರದುರ್ಗ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ತಿಳಿಸಿದ್ದಾರೆ.

ಖಾಸಗಿ ಬಸ್ ಮಾಲೀಕರ ಸಂಘದ ಕಾರ್ಯದರ್ಶಿ ಜಿ.ಬಿ.ಶೇಖರ್, ಉಪಾಧ್ಯಕ್ಷ ಇ.ವಿ.ಅಜ್ಜಪ್ಪ, ಖಜಾಂಚಿ ಎಸ್.ವಿ.ನಾಗರಾಜ್ ಇವರುಗಳು ವೇದಿಕೆಯಲ್ಲಿದ್ದರು ಖಾಸಗಿ ಬಸ್ ಮಾಲೀಕರುಗಳಾದ ಸಿದ್ದರಾಮೇಶ್, ವಸಂತ, ಪವನ್, ಅಬ್ಬುಬಕ್ಕರ್‍ಸಿದ್ದಿಕ್ ಇನ್ನು ಅನೇಕರು ಸಭೆಯಲ್ಲಿ ಭಾಗವಹಿಸಿ ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳದಿಂದ ಆಗಿರುವ ತೊಂದರೆಗಳನ್ನು ತೋಡಿಕೊಂಡರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now