Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್ : ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಡಿಕೆಶಿ ಪಟ್ಟಾಭಿಷೇಕಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್!

---Advertisement---

ಸುದ್ದಿಒನ್,ಬೆಂಗಳೂರು,ಮೇ.27: ರಾಜ್ಯ ರಾಜಕಾರಣದ ಬಹುದೊಡ್ಡ ಕುತೂಹಲಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ಕಳೆದ ಕೆಲವು ದಿನಗಳಿಂದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ನಡೆಯುತ್ತಿದ್ದ ಅಧಿಕಾರ ಹಸ್ತಾಂತರದ ಹಗ್ಗಜಗ್ಗಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ದಿಢೀರ್ ಬ್ರೇಕ್ ಹಾಕಿದೆ.

ಹೌದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಅವರಿಗೆ ದೆಹಲಿ ನಾಯಕರು ಸೂಚನೆ ನೀಡಿದ್ದು, ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರನ್ನು ಕೂರಿಸಲು ಕೌಂಟ್‌ಡೌನ್ ಶುರುವಾಗಿದೆ.

ದೆಹಲಿಯಲ್ಲಿ ನಡೆದ ಹೈಕಮಾಂಡ್ ನಾಯಕರ ಸುದೀರ್ಘ ಸರಣಿ ಸಭೆಗಳ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಅಧಿಕೃತ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಅಲ್ಲದೆ, ನಾಳೆ (ಗುರುವಾರ) ಬೆಳಗ್ಗೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಸಿಎಂ ಉಪಾಹಾರ ಸಭೆ ನಡೆಸಲಿದ್ದು, ಆ ಬಳಿಕ ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಲಿದ್ದಾರೆ ಎನ್ನಲಾಗಿದೆ. ಈ ಮೂಲಕ ‘ಕನಕಪುರ ಬಂಡೆ’ ಡಿ.ಕೆ. ಶಿವಕುಮಾರ್ ಅವರ ಸಿಎಂ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ.

ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಡಲಿರುವ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ದೆಹಲಿ ಮಟ್ಟದಲ್ಲಿ ದೊಡ್ಡ ಆಫರ್ ಒಂದನ್ನು ನೀಡಿದೆ. ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ, ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಜವಾಬ್ದಾರಿ ನೀಡಲು ರಾಹುಲ್ ಗಾಂಧಿ ನೇತೃತ್ವದ ತಂಡ ಒಲವು ತೋರಿದೆ. ಆದರೆ, ತಮಗೆ ರಾಷ್ಟ್ರ ರಾಜಕಾರಣಕ್ಕೆ ಹೋಗಲು ಆಸಕ್ತಿಯಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದು, ಹೈಕಮಾಂಡ್ ನಿರ್ಧಾರದ ಬಗ್ಗೆ ಯೋಚಿಸಲು ಸ್ವಲ್ಪ ಕಾಲಾವಕಾಶ ಕೇಳಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಿಂದ ಕೇಳಿಬರುತ್ತಿದೆ.

ಮುಂದಿನ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ದೇಶಾದ್ಯಂತ ಸಾಮಾಜಿಕ ನ್ಯಾಯ ಮತ್ತು ಜಾತಿ ಜನಗಣತಿಯ ಅಸ್ತ್ರವನ್ನು ಬಳಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರಭಾವಿ ಹಿಂದುಳಿದ ವರ್ಗದ (OBC) ನಾಯಕರಾಗಿರುವ ಸಿದ್ದರಾಮಯ್ಯ ಅವರನ್ನು ರಾಷ್ಟ್ರ ಮಟ್ಟದಲ್ಲಿ ಬಳಸಿಕೊಳ್ಳುವುದು ರಾಹುಲ್ ಗಾಂಧಿ ಅವರ ಮಾಸ್ಟರ್ ಪ್ಲಾನ್ ಎನ್ನಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now