ಸುದ್ದಿಒನ್,ಬೆಂಗಳೂರು,ಮೇ.27: ಜವಹಾರ್ ಲಾಲ್ ನೆಹರೂ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ಮೊದಲ ಪ್ರಧಾನಮಂತ್ರಿಗಳಾಗಿ 17 ವರ್ಷಗಳ ಕಾಲ ಜನರ ಸೇವೆ ಮಾಡಿದ್ದಾರೆ. ಸಮಾಜವಾದಿ ಮತ್ತು ಮಿಶ್ರ ಆರ್ಥಿಕತೆಗೆ ಹೆಚ್ಚು ಒತ್ತು ನೀಡಿ, ಬೃಹತ್ ಅಣೆಕಟ್ಟುಗಳ ನಿರ್ಮಾಣ, ಶಿಕ್ಷಣ, ಸಹಕಾರ ಕ್ಷೇತ್ರಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ನೆಹರೂ ಕಾರಣಕರ್ತರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದಿವಂಗತ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆಯ ಅಂಗವಾಗಿ ಇಂದು ವಿಧಾನಸೌಧ ಆವರಣದಲ್ಲಿರುವ ನೆಹರೂರವರ ಪುತ್ಥಳಿ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಯನ್ನು ವೈಜ್ಞಾನಿಕವಾಗಿ ಸಾಧಿಸುವ ಪ್ರಯತ್ನ ಮಾಡಿದ್ದರು. ಅವರು ಅಗಲಿ 62 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ನೆಹರೂರವರನ್ನು ಸ್ಮರಿಸಿ, ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ. ಅವರ ಆದರ್ಶಗಳು ಸದಾ ಮೇಲ್ಪಂಕ್ತಿಯಲ್ಲಿವೆ ಎಂದು ಹೇಳಿದ್ದಾರೆ.
ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ|| ಶಾಲಿನಿ ರಜನೀಶ್ ಸೇರಿದಂತೆ ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ಸ್ವಾತಂತ್ರ್ಯ ಹೋರಾಟಗಾರ, ದೇಶದ ಹೆಮ್ಮೆಯ ಪ್ರಧಾನಿಯಾದ ದಿವಂಗತ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆಯ ಅಂಗವಾಗಿ ಇಂದು ವಿಧಾನಸೌಧ ಆವರಣದಲ್ಲಿರುವ ನೆಹರೂರವರ ಪುತ್ಥಳಿ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ರಾಷ್ಟ್ರನಿರ್ಮಾತೃವಿಗೆ ಗೌರವ ನಮನ ಸಲ್ಲಿಸಿದೆ.
ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಸರ್ಕಾರದ… pic.twitter.com/cTGMYUYtZu
— Siddaramaiah (@siddaramaiah) May 27, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















