Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ರಾಜೀನಾಮೆ ಸುಳಿವು? ಜನತೆಗೆ ಭಾವುಕ ಸಂದೇಶ ನೀಡಿದ ಸಿದ್ದರಾಮಯ್ಯ; ನಾಳೆ ಮಹತ್ವದ ಬೆಳವಣಿಗೆ ಸಾಧ್ಯತೆ

---Advertisement---

ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳ ಸುಳಿವು ದೊರಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬೆಳವಣಿಗೆಯ ನಡುವೆಯೇ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದ ಮೂಲಕ ರಾಜ್ಯದ ಜನತೆಗೆ ಭಾವುಕ ಸಂದೇಶ ರವಾನಿಸಿರುವುದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ತಮ್ಮ ಟ್ವೀಟ್‌ನಲ್ಲಿ ಸಿದ್ದರಾಮಯ್ಯ, “ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.ಇನ್ನೂ ಮುಂದುವರಿದು, “ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿದ ಪ್ರತಿಯೊಂದು ಭರವಸೆಯನ್ನೂ ಈಡೇರಿಸುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮ್ಮದಾಗಿದೆ. ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ಪ್ರತೀ ಮನೆಗೂ ತಲುಪಿಸಿದ್ದೇವೆ” ಎಂದು ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆ ಕುರಿತು ಉಲ್ಲೇಖಿಸಿರುವ ಸಿಎಂ, “ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆ ಕೋಟ್ಯಂತರ ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸಿದೆ. ಈ ಯೋಜನೆಯಡಿ ಇದುವರೆಗೆ 18,897 ಕೋಟಿ ರೂ. ವೆಚ್ಚ ಮಾಡಲಾಗಿದ್ದು, 4.26 ಕೋಟಿ ಪಡಿತರದಾರರು ಇದರ ಪ್ರಯೋಜನ ಪಡೆಯುತ್ತಿದ್ದಾರೆ” ಎಂದು ವಿವರಿಸಿದ್ದಾರೆ.ಸಿದ್ದರಾಮಯ್ಯ ಅವರ ಈ ಸಂದೇಶ ರಾಜಕೀಯವಾಗಿ ಮಹತ್ವ ಪಡೆದಿದ್ದು, ರಾಜೀನಾಮೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದೆ. ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಗಳು ತೀವ್ರಗೊಂಡಿರುವ ನಡುವೆ, ನಾಳೆಯ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ನೀಡುವ ಸಾಧ್ಯಸಾಧ್ಯತೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now