ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೆಸರು ಬಹುತೇಕ ಖಚಿತವಾಗುತ್ತಿರುವ ನಡುವೆಯೇ, ನೊಣವಿನಕೆರೆ ಅಜ್ಜಯ್ಯ ಮಠದಲ್ಲಿ ನಡೆದ ಘಟನೆಯೊಂದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.ಬಹುಕಾಲದಿಂದ ಮುಖ್ಯಮಂತ್ರಿ ಹುದ್ದೆಯ ಕನಸು ಕಂಡಿದ್ದ ಡಿಕೆ ಶಿವಕುಮಾರ್, ಅದಕ್ಕಾಗಿ ರಾಜ್ಯದ ಹಲವು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆಗಳನ್ನು ಸಲ್ಲಿಸಿದ್ದರು.
ಅನೇಕ ಸ್ವಾಮೀಜಿಗಳ ಆಶೀರ್ವಾದವೂ ಪಡೆದಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರೇಕ್‌ಫಾಸ್ಟ್ ಸಭೆಯಲ್ಲಿ “ಮುಂದಿನ ಸಿಎಂ ಡಿಕೆ ಶಿವಕುಮಾರ್” ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಡಿಕೆಶಿ ನೊಣವಿನಕೆರೆ ಅಜ್ಜಯ್ಯ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದೆ.ಈ ವೇಳೆ ಅಜ್ಜಯ್ಯ ಸ್ವಾಮೀಜಿ ಡಿಕೆ ಶಿವಕುಮಾರ್ ಅವರಿಗೆ ಹಣ್ಣು-ಕಾಯಿ ನೀಡಿ ಆಶೀರ್ವಾದ ಮಾಡಿದ್ದು, ಜೊತೆಗೆ ಮಹತ್ವದ ಎಚ್ಚರಿಕೆಯೊಂದನ್ನೂ ನೀಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. “ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವವರೆಗೂ ಯಾವುದೇ ಹೇಳಿಕೆ ನೀಡಬೇಡಿ. ಹೆಚ್ಚು ಮಾತಾಡಿದರೆ ಸಮಸ್ಯೆ ಉಂಟಾಗಬಹುದು” ಎಂದು ಸ್ವಾಮೀಜಿ ಎಚ್ಚರಿಸಿದ್ದಾರೆ ಎನ್ನಲಾಗುತ್ತಿದೆ.
“ಮಾತು ಆಡಿದರೆ ಹೋಯ್ತು” ಎಂಬ ಸೂಚನೆ ನೀಡಿದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸ್ಥಾನ ಕುರಿತು ಇದುವರೆಗೆ ಡಿಕೆ ಶಿವಕುಮಾರ್ ಮಾಧ್ಯಮಗಳ ಮುಂದೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡದೇ ಮೌನ ಕಾಪಾಡಿಕೊಂಡಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.ಇದೀಗ ಡಿಕೆ ಶಿವಕುಮಾರ್ ಅವರ ಪ್ರತಿಯೊಂದು ಹೆಜ್ಜೆಯೂ ಕುತೂಹಲ ಕೆರಳಿಸಿದ್ದು, ಮುಖ್ಯಮಂತ್ರಿ ಪಟ್ಟದ ಘೋಷಣೆಗೆ ಮುನ್ನ ಧಾರ್ಮಿಕ ಕೇಂದ್ರಗಳ ಭೇಟಿ ಹಾಗೂ ಸ್ವಾಮೀಜಿಗಳ ಸಲಹೆಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















