Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರು ಬಳಿ ರಸ್ತೆ ಅಪಘಾತ ; ಚಳ್ಳಕೆರೆಯ ಐವರು ಸಾವು

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಮೇ. 29 : ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಬ್ರಿಡ್ಜ್, ಶ್ರೀನಿವಾಸ ಡಾಬಾ ಮುಂಭಾಗದಲ್ಲಿ ಗುರುವಾರ ರಾತ್ರಿ ಸುಮಾರು 9:45 ರ ವೇಳೆಯಲ್ಲಿ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಳ್ಳಕೆರೆ ಮೂಲದ ಛಾಯಾಗ್ರಾಹಕರ ಸಂಘದ ಸಹ ಕಾರ್ಯದರ್ಶಿ ರಾಘವೇಂದ್ರ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಅದೇ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಅಪ್ಪಳಿಸಿದೆ. ಈ ವೇಳೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಘು(40 ವರ್ಷ), ರುದ್ರೇಶ(36 ವರ್ಷ), ಪ್ರಮೋದ(35 ವರ್ಷ), ಸೋಮಶೇಖರ (35 ವರ್ಷ) ಮತ್ತು ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಮೊಳಕಾಲ್ಮುರು ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now